ಬೆಂಗಳೂರು: ರಾಜ್ಯದಲ್ಲಿ ನಡೆಯುವ ಸರ್ಕಾರಿ ಕಾರ್ಯಕ್ರಮಗಳಲ್ಲಿ ಕನ್ನಡ ಕಡ್ಡಾಯ ಬಳಕೆಗೆ ಆದೇಶ ಹೊರಡಿಸಲಾಗಿದೆ.
ರಾಜ್ಯದಲ್ಲಿ ನಡೆಯುವ ಕಾರ್ಯಕ್ರಮಗಳಲ್ಲಿ ಕನ್ನಡ ಬಳಕೆ ಕಡ್ಡಾಯಗೊಳಿಸಲಾಗಿದೆ ಕೇಂದ್ರ ಸರ್ಕಾರ, ರಾಜ್ಯ ಸರ್ಕಾರದ ಕಾರ್ಯಕ್ರಮಗಳಲ್ಲಿ ಕನ್ನಡ ಬಳಕೆ ಕಡ್ಡಾಯವಾಗಿರುತ್ತದೆ, ಕನ್ನಡ ಬಳಕೆಯನ್ನು ಕಡ್ಡಾಯಗೊಳಿಸಿ ರಾಜ್ಯ ಸರ್ಕಾರದಿಂದ ಅಧಿಕೃತ ಆದೇಶ ಹೊರಡಿಸಲಾಗಿದೆ. ಇನ್ನು ಮುಂದೆ ಕಾರ್ಯಕ್ರಮಗಳಲ್ಲಿ ಕಡ್ಡಾಯವಾಗಿ ಕನ್ನಡ ಬಳಸಬೇಕು ಎಂದು ಹೇಳಲಾಗಿದೆ.