ಚಾಮರಾಜನಗರ: ಚಾಮರಾಜನಗರ ಜಿಲ್ಲೆಯಲ್ಲಿ ಸಿಡಿಲಿಗೆ ಒಂದೇ ದಿನ ಇಬ್ಬರು ಬಲಿಯಾಗಿದ್ದಾರೆ. ಮೀಣ್ಯಂನಲ್ಲಿ ಸಿಡಿಲು ಬಡಿದು ಕುರಿಗಾಹಿ ಎಸ್. ಮಾದಪ್ಪ ಮೃತಪಟ್ಟಿದ್ದಾರೆ.
ಚಾಮರಾಜನಗರ ಜಿಲ್ಲೆ ಹನೂರು ತಾಲ್ಲೂಕಿನ ಮೀಣ್ಯಂ ಗ್ರಾಮದಲ್ಲಿ ಕುರಿಗಾಹಿ ಮಾದಪ್ಪ ಜೊತೆ ಸಿಡಿಲಿಗೆ 10ಕ್ಕೂ ಹೆಚ್ಚು ಕುರಿಗಳು ಬಲಿಯಾಗಿವೆ. ರಾಮಾಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.
ಕೆಸ್ತೂರು ಗ್ರಾಮದಲ್ಲಿ ಸಂಜೆ ಸಿಡಿಲು ಬಳಿದು ರೇವಣ್ಣ ಮೃತಪಟ್ಟಿದ್ದಾರೆ. ಚಾಮರಾಜನಗರ ಜಿಲ್ಲೆಯ ಯಳಂದೂರು ತಾಲ್ಲೂಕಿನ ಕೆಸ್ತೂರು ಗ್ರಾಮದಲ್ಲಿ ಗದ್ದೆಯಲ್ಲಿ ಭತ್ತದ ಪೈರು ನಾಟಿ ಮಾಡುತ್ತಿದ್ದಾಗ ಸಿಡಿಲು ಬಡಿದು ರೇವಣ್ಣ ಮೃತಪಟ್ಟಿದ್ದರು.