ಕಳೆದ ರಾತ್ರಿ ತೀವ್ರ ಹೃದಯಾ ಘಾತಕ್ಕೊಳಗಾಗಿ ಬೆಂಗಳೂರಿನ ಎಂ.ಎಸ್. ರಾಮಯ್ಯ ಆಸ್ಪತ್ರೆಗೆ ದಾಖಲಾಗಿದ್ದ ಸಚಿವ ಉಮೇಶ್ ಕತ್ತಿ, ಚಿಕಿತ್ಸೆ ಫಲಕಾರಿಯಾಗದೆ ವಿಧಿವಶರಾಗಿದ್ದಾರೆ.
ಡಾಲರ್ಸ್ ಕಾಲೋನಿಯ ತಮ್ಮ ನಿವಾಸದಲ್ಲಿದ್ದ ಸಂದರ್ಭದಲ್ಲಿಯೇ ಉಮೇಶ್ ಕತ್ತಿ ಅವರಿಗೆ ರಾತ್ರಿ 10 ಗಂಟೆ ಸುಮಾರಿಗೆ ಹೃದಯಾಘಾತ ಸಂಭವಿಸಿದ್ದು, ಕೂಡಲೇ ಅವರನ್ನು ಎಂ.ಎಸ್. ರಾಮಯ್ಯ ಆಸ್ಪತ್ರೆಗೆ ದಾಖಲಿಸಲಾಗಿತ್ತು.
ಉಮೇಶ್ ಕತ್ತಿ ಅವರನ್ನು ತುರ್ತು ನಿಗಾ ಘಟಕದಲ್ಲಿ ಇರಿಸಿ ಚಿಕಿತ್ಸೆ ನೀಡಲಾಗಿತ್ತಾದರೂ ಫಲಕಾರಿಯಾಗಲಿಲ್ಲ. ಉಮೇಶ್ ಕತ್ತಿ ಅವರ ಅಂತ್ಯಕ್ರಿಯೆ ಇಂದು ನಡೆಯಲಿದೆ ಎಂದು ತಿಳಿದುಬಂದಿದೆ.