ಬಸವರಾಜ ಬೊಮ್ಮಾಯಿ ಅವರು ಮುಖ್ಯಮಂತ್ರಿಗಳಾಗಿ ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ಜನೋತ್ಸವ ಕಾರ್ಯಕ್ರಮವನ್ನು ನಾಳೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರದ ಹೊರ ವಲಯದಲ್ಲಿ ಹಮ್ಮಿಕೊಂಡಿದ್ದು, ಆದರೆ ಇದು ಮತ್ತೆ ಮುಂದೂಡಿಕೆಯಾಗಲಿದೆಯಾ ಎಂಬ ಅನುಮಾನ ಮೂಡಿದೆ.
ಬೊಮ್ಮಾಯಿಯವರ ಸಚಿವ ಸಂಪುಟದಲ್ಲಿ ಆಹಾರ ಸಚಿವರಾಗಿದ್ದ ಉಮೇಶ್ ಕತ್ತಿ ಕಳೆದ ರಾತ್ರಿ ಹೃದಯಾಘಾತದಿಂದ ವಿಧಿವಶರಾಗಿದ್ದು, ಅವರ ಅಂತ್ಯಕ್ರಿಯೆ ಇಂದು ಬೆಳಗಾವಿ ಜಿಲ್ಲೆ ಹುಕ್ಕೇರಿ ತಾಲೂಕಿನ ಬೆಲ್ಲದ ಬಾಗೇವಾಡಿ ಗ್ರಾಮದಲ್ಲಿ ನಡೆಯಲಿದೆ.
ಉಮೇಶ್ ಕತ್ತಿಯವರ ಅಂತ್ಯಕ್ರಿಯೆಯಲ್ಲಿ ಭಾಗವಹಿಸಲು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೇರಿದಂತೆ ಅವರ ಸಚಿವ ಸಂಪುಟದ ಬಹುತೇಕ ಸಚಿವರು ಬೆಳಗಾವಿಗೆ ತೆರಳಲಿದ್ದಾರೆ. ಹೀಗಾಗಿ ನಾಳೆ ನಡೆಯಲಿರುವ ‘ಜನೋತ್ಸವ’ ಕಾರ್ಯಕ್ರಮ ಮುಂದೂಡಿಕೆಯಾಗಲಿದೆಯಾ ಎಂಬ ಪ್ರಶ್ನೆ ಮೂಡಿದೆ.
ಈ ಹಿಂದೆಯೂ ಕಾರ್ಯಕ್ರಮವನ್ನು ನಿಗದಿಪಡಿಸಲಾಗಿತ್ತಾದರೂ ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಅವರ ಹತ್ಯೆಯ ಹಿನ್ನೆಲೆಯಲ್ಲಿ ಮುಂದೂಡಿಕೆ ಮಾಡಲಾಗಿತ್ತು. ಬಳಿಕ ಸೆಪ್ಟೆಂಬರ್ 8ರ ನಾಳೆಗೆ ಜನೋತ್ಸವ ನಿಗದಿಪಡಿಸಲಾಗಿದ್ದು, ಇದೀಗ ಮತ್ತೆ ಮುಂದೂಡಿಕೆಯಾಗುವ ಸಾಧ್ಯತೆ ಇದೆ.