alex Certify BREAKING: ರಾಜ್ಯಾದ್ಯಂತ ಮೂರು ದಿನ ಶೋಕಾಚರಣೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING: ರಾಜ್ಯಾದ್ಯಂತ ಮೂರು ದಿನ ಶೋಕಾಚರಣೆ

 

ಬೆಳಗಾವಿ: ಆಹಾರ ಸಚಿವ ಉಮೇಶ್ ಕತ್ತಿ ಅವರ ಅಗಲಿಕೆ ಆಘಾತ ತಂದಿದೆ. ಅತ್ಯಂತ ಆತ್ಮೀಯ ಸ್ನೇಹಿತ, ಸಚಿವ ಸಂಪುಟದ ಹಿರಿಯ ಸಹೋದ್ಯೋಗಿ, ಧೀಮಂತ ನಾಯಕ ನಮ್ಮನ್ನು ಅಗಲಿದ್ದಾರೆ. ಅವರ ಅಂತ್ಯಕ್ರಿಯೆಯಲ್ಲಿ ಭಾಗವಹಿಸುವ ನಿಟ್ಟಿನಲ್ಲಿ ಬೆಳಗಾವಿಗೆ ಆಗಮಿಸಿದ್ದೇನೆ ಎಂದು ಸಿಎಂ ಬಸವರಾಜ್ ಬೊಮ್ಮಾಯಿ ಕಂಬನಿ ಮಿಡಿದಿದ್ದಾರೆ.

ಬೆಳಗಾವಿಯ ಸಾಂಬ್ರಾ ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಬೊಮ್ಮಾಯಿ, ಸಚಿವ ಉಮೇಶ್ ಕತ್ತಿ ಅವರ ಅಂತ್ಯಕ್ರಿಯೆಗೆ ಎಲ್ಲ ವ್ಯವಸ್ಥೆ ಮಾಡಲಾಗಿದೆ. ರಾಜ್ಯ ಸರ್ಕಾರದಿಂದಲೇ ಅಂತ್ಯಕ್ರಿಯೆ ನೆರವೇರಲಿದೆ. ಸಾರ್ವಜನಿಕರಿಗೆ ಅಂತಿಮ ದರ್ಶನಕ್ಕೆ ಹಾಗೂ ಮನೆಯವರಿಗೆ ಪೂಜೆಗೆ ಅವಕಾಶ ಕಲ್ಪಿಸಲಾಗಿದೆ. ಅದಾದ ಬಳಿಕ ಸರ್ಕಾರದ ವತಿಯಿಂದ ಅಂತ್ಯಕ್ರಿಯೆ ನೆರವೇರಲಿದೆ ಎಂದರು.

ಇದೇ ವೇಳೆ ಸರ್ಕಾರದಿಂದ ಘೋಷಣೆಯಾಗಿದ್ದ ಒಂದು ದಿನದ ಶೋಕಾಚರಣೆ ಮೂರುದಿನ ನಡೆಸಲು ತೀರ್ಮಾನಿಸಲಾಗಿದೆ. ಸಚಿವರ ಅಕಾಲಿಕ ನಿಧನ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ಇಂದು, ನಾಳೆ ಹಾಗೂ ನಾಡಿದ್ದು ಮೂರು ದಿನ ಶೋಕಾಚರಣೆ ಮಾಡಲಾಗುವುದು. ಈ ವೇಳೆ ರಾಷ್ಟ್ರಧ್ವಜ ಅರ್ಧಕ್ಕೆ ಹಾರಿಸಲಾಗುವುದು. ಯಾವುದೇ ಸರ್ಕಾರಿ ಕಾರ್ಯಕ್ರಮಗಳು ನಡೆಯುವುದಿಲ್ಲ. ಆದರೆ ಪ್ರವಾಹ ಪರಿಸ್ಥಿತಿ ತುರ್ತು ನಿರ್ವಹಣೆ, ಕಾರ್ಯಾಚರಣೆ ಮಾತ್ರ ಮುಂದುವರೆಯಲಿದೆ ಎಂದು ಹೇಳಿದರು.

ಕತ್ತಿ ನಿಧನ ಶೋಕಾಚರಣೆ ಹಿನ್ನೆಲೆಯಲ್ಲಿ ಬಿಜೆಪಿ ಜನೋತ್ಸವ ಸಮಾವೇಶ ಮುಂದೂಡಲಾಗಿದೆ. ನಾಳೆ ದೊಡ್ಡಬಳ್ಳಾಪುರದಲ್ಲಿ ನಡೆಯಬೇಕಿದ್ದ ಸಮಾವೇಶ ಸೆ.11ರಂದು ಭಾನುವಾರಕ್ಕೆ ನಿಗದಿಪಡಿಸಲಾಗಿದೆ ಎಂದು ತಿಳಿಸಿದರು.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...