ಬೆಳಗಾವಿ: ಹೃದಯಾಘಾತದಿಂದ ನಿಧನರಾದ ಸಚಿವ ಉಮೇಶ ಕತ್ತಿ ಪಾರ್ಥಿವ ಶರೀರವನ್ನು ಹುಕ್ಕೇರಿ ತಾಲೂಕಿನ ಬೆಲ್ಲದ ಬಾಗೇವಾಡಿ ಗ್ರಾಮದ ಬಳಿ ಇರುವ ವಿಶ್ವರಾಜ ಶುಗರ್ ಕಾರ್ಖಾನೆಗೆ ತಂದು ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದ್ದು, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೇರಿದಂತೆ ಗಣ್ಯರು ಅಂತಿಮ ನಮನ ಸಲ್ಲಿಸಿದ್ದಾರೆ.
ವಿವಿಧ ಮಠಾಧೀಶರು ಬೆಲ್ಲದಬಾಗೇವಾಡಿಗೆ ಆಗಮಿಸಿದ್ದಾರೆ. ಸ್ವಾಮೀಜಿಗಳ ನೇತೃತ್ವದಲ್ಲಿ ವೀರಶೈವ ಲಿಂಗಾಯಿತ ವಿಧಿ ವಿಧಾನದ ಅನ್ವಯ ಅಂತ್ಯಕ್ರಿಯೆ ನೆರವೇರಿಸಲಾಗುತ್ತಿದೆ. ಅಂತ್ಯ ಸಂಸ್ಕಾರದಲ್ಲಿ ಅಪಾರ ಸಂಖ್ಯೆಯ ಜನ ಭಾಗವಹಿಸಿದ್ದು, ಕಂಬನಿ ಮಿಡಿದಿದ್ದಾರೆ.