ಪ್ರಸಕ್ತ ಸಾಲಿನಲ್ಲಿ ದ್ವಿತೀಯ ಪಿಯುಸಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಮಹತ್ವದ ಮಾಹಿತಿಯೊಂದು ಇಲ್ಲಿದೆ. ಸೆಪ್ಟೆಂಬರ್ 19 ರಿಂದ ನಡೆಸಲು ಉದ್ದೇಶಿಸಿದ್ದ ಮಧ್ಯವಾರ್ಷಿಕ ಪರೀಕ್ಷೆಯನ್ನು ಮುಂದೂಡಲಾಗಿದೆ.
ಈ ಕುರಿತಂತೆ ಶಿಕ್ಷಣ ಇಲಾಖೆ ಮಾಹಿತಿ ನೀಡಿದ್ದು, ದಸರಾ ರಜೆ ನಂತರ ದ್ವಿತೀಯ ಪಿಯು ಮಧ್ಯವಾರ್ಷಿಕ ಪರೀಕ್ಷೆಯನ್ನು ನಡೆಸಲು ತೀರ್ಮಾನಿಸಲಾಗಿದೆ. ಈ ಸಂಬಂಧ ಶೀಘ್ರದಲ್ಲೇ ಪರಿಷ್ಕೃತ ವೇಳಾಪಟ್ಟಿಯನ್ನು ಬಿಡುಗಡೆ ಮಾಡಲಾಗುತ್ತದೆ.
ಕಾಲೇಜು ಹಂತದಲ್ಲಿ ನಡೆಸಬೇಕಾಗಿದ್ದ ಪರೀಕ್ಷೆ ಈಗಾಗಲೇ ವಿಳಂಬವಾಗಿರುವುದರಿಂದ ಎರಡೂ ಪರೀಕ್ಷೆಗಳನ್ನು ವಿದ್ಯಾರ್ಥಿಗಳು ಕಡಿಮೆ ಅವಧಿಯಲ್ಲಿ ಎದುರಿಸುವುದು ಕಷ್ಟವಾಗಲಿದೆ ಎಂಬ ಕಾರಣಕ್ಕೆ ಈ ತೀರ್ಮಾನ ಕೈಗೊಳ್ಳಲಾಗಿದೆ.