ಬೆಂಗಳೂರು: ಬಿಬಿಎಂಪಿ ಚುನಾವಣೆ ಹಾಗೂ ವಾರ್ಡ್ ವಿಂಗಡಣೆ ವಿಚಾರವಾಗಿ ಚುನಾವಣೆ ಮುಂದೂಡುವಂತೆ ಬೊಮ್ಮನಹಳ್ಳಿ ಶಾಸಕ ಸತೀಶ್ ರೆಡ್ಡಿ ಹೈಕೋರ್ಟ್ ಮೆಟ್ಟಿಲೇರಿದ್ದಾರೆ ಎಂದು ಹೇಳಲಾಗಿತ್ತು. ಆದರೆ ಈ ವಿಚಾರವಾಗಿ ಇದೀಗ ಶಾಸಕರು ಸ್ಪಷ್ಟನೆ ನೀಡಿದ್ದಾರೆ.
ಚುನಾವಣೆ ಮುಂದೂಡುವಂತೆ ನಾನು ಹೈಕೋರ್ಟ್ ಗೆ ಯಾವುದೇ ಅರ್ಜಿ ಸಲ್ಲಿಸಿಲ್ಲ. ನನ್ನ ಮತದಾರರನ್ನು ನನ್ನ ಕ್ಷೇತ್ರದಲ್ಲಿ ಉಳಿಸುವಂತೆ ಕೋರ್ಟ್ ಮುಂದೆ ಮನವಿ ಮಾಡಿದ್ದೇನೆ ಎಂದು ಹೇಳಿದ್ದಾರೆ.
ನನ್ನ ಕ್ಷೇತ್ರದ ಮತದಾರರನ್ನು ಉಳಿಸಿಕೊಡಲು ಬಿಬಿಎಂಪಿ ಹಾಗೂ ಚುನಾವಣಾ ಅಧಿಕಾರಿಗಳಿಗೆ ನಿರ್ದೇಶನ ನೀಡುವಂತೆ ಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದೇನೆ ಎಂದು ತಿಳಿಸಿದ್ದಾರೆ. ಮತದಾರರ ಪಟ್ಟಿ ಪರಿಷ್ಕೃತಗೊಳಿಸದ ಕಾರಣ ಶಾಸಕರು ಹೈಕೋರ್ಟ್ ಮೊರೆ ಹೋಗಿದ್ದಾರೆ ಎಂದು ತಿಳಿದುಬಂದಿದೆ.