ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ನೌಕರರಿಗೆ ಸಿಹಿ ಸುದ್ದಿಯೊಂದು ಇಲ್ಲಿದೆ. ಸಕಾಲಕ್ಕೆ ವೇತನ ಪಾವತಿಯಾಗುತ್ತಿಲ್ಲ ಎಂಬ ಕೊರಗನ್ನು ನಿವಾರಿಸಲು ನಿಗಮದ ಅಧಿಕಾರಿಗಳು ಮುಂದಾಗಿದ್ದಾರೆ.
ಹೌದು, ಇನ್ನು ಮುಂದೆ ಕೆ.ಎಸ್.ಆರ್.ಟಿ.ಸಿ.ಯ ಎಲ್ಲ ನೌಕರರಿಗೆ ಪ್ರತಿ ತಿಂಗಳ ಮೊದಲ ದಿನವೇ ವೇತನ ಪಾವತಿಸಲು ತೀರ್ಮಾನಿಸಲಾಗಿದ್ದು, ಅಕ್ಟೋಬರ್ ತಿಂಗಳಿನಿಂದಲೇ ಈ ಹೊಸ ಪದ್ದತಿ ಜಾರಿಗೆ ಬರಲಿದೆ.
ಕರ್ತವ್ಯ ನಿರ್ವಹಣೆ ಕುರಿತಂತೆ ವೇತನದ ಬಿಲ್ ಗಳನ್ನು ತಯಾರಿಸಲು ಪ್ರತಿ ತಿಂಗಳ 20ರಿಂದ 30ನೇ ದಿನಾಂಕದವರೆಗೆ ಊಹಾತ್ಮಕ ಹಾಜರಾತಿಯನ್ನು ಪರಿಗಣಿಸಲಾಗುತ್ತಿದ್ದು, ಹೀಗಾಗಿ ಅತಿ ಅನಿವಾರ್ಯ ಕಾರಣಗಳನ್ನು ಹೊರತುಪಡಿಸಿ ನೌಕರರು ಕರ್ತವ್ಯಕ್ಕೆ ಗೈರು ಹಾಜರಾಗದಂತೆ ತಿಳಿಸಲಾಗಿದೆ.