ಶಾಸಕ ದಿನೇಶ್ ಗುಂಡೂರಾವ್ ಅವರ ಮನೆಯಲ್ಲಿ ಕೆಲಸ ಮಾಡುತ್ತಿದ್ದ ವ್ಯಕ್ತಿಯೊಬ್ಬ ಎರಡು ದಿನಗಳ ಹಿಂದೆ ನಾಪತ್ತೆಯಾಗಿದ್ದು, ಈ ಕುರಿತಂತೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾದ ಬಳಿಕ ಇದೀಗ ಆತನನ್ನು ಪತ್ತೆ ಹಚ್ಚಲಾಗಿದೆ.
ಪಶ್ಚಿಮ ಬಂಗಾಳ ಮೂಲದ 41 ವರ್ಷದ ಸಂಜು ಶರ್ಮ ನಾಪತ್ತೆಯಾದವನಾಗಿದ್ದು, ಈತ ಕಳೆದ ಮೂರು ವರ್ಷಗಳಿಂದ ದಿನೇಶ್ ಗುಂಡೂರಾವ್ ಅವರ ಮನೆಯಲ್ಲಿ ಕೆಲಸ ಮಾಡುತ್ತಿದ್ದ ಎನ್ನಲಾಗಿದೆ.
ನಾಪತ್ತೆ ದೂರು ದಾಖಲಾದ ಬಳಿಕ ಪೊಲೀಸರು ಈತನ ಫೋಟೋವನ್ನು ರೈಲು ನಿಲ್ದಾಣ, ಬಸ್ ನಿಲ್ದಾಣಗಳಿಗೆ ರವಾನಿಸಿದ್ದು ಕೊನೆಗೆ ರೈಲು ನಿಲ್ದಾಣದಲ್ಲಿ ಪತ್ತೆಯಾಗಿದ್ದಾನೆ. ಈ ಸಂದರ್ಭದಲ್ಲಿ ನನಗೆ ಬೆಂಗಳೂರಿನಲ್ಲಿ ಕೆಲಸ ಮಾಡಲು ಇಷ್ಟವಿಲ್ಲ ಆದರೆ ನನ್ನ ಕುಟುಂಬಸ್ಥರು ಒತ್ತಾಯ ಮಾಡುತ್ತಾರೆ. ಹೀಗಾಗಿ ಮನೆ ಬಿಟ್ಟು ಬಂದಿದ್ದೆ ಎಂದಿದ್ದಾನೆ.