ಹೈದರಾಬಾದ್: ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ತೆಲಂಗಾಣ ಪೌರಾಡಳಿತ ಹಾಗೂ ನಗರಾಭಿವೃದ್ಧಿ ಸಚಿವ ಕೆ.ಟಿ.ರಾಮಾರಾವ್ ಅವರನ್ನು ಭೇಟಿಯಾಗಿ ಚರ್ಚೆ ನಡೆಸಿದ್ದಾರೆ.
ಹೈದರಾಬಾದ್ ನಲ್ಲಿ ಬೆಳಿಗ್ಗೆ ಮಾಜಿ ಸಿಎಂ ಕುಮಾರಸ್ವಾಮಿ ಹಾಗೂ ತೆಲಂಗಾಣ ಸಚಿವ ಕೆಟಿಆರ್ ಇಬ್ಬರೂ ಭೇಟಿಯಾಗಿ, ಉಪಹಾರ ಸೇವಿಸಿದರು. ಬಳಿಕ ಉಭಯ ನಾಯಕರು ರಾಜ್ಯ ರಾಜಕಾರಣ ಹಾಗೂ ರಾಷ್ಟ್ರ ರಾಜಕಾರಣದ ಬಗ್ಗೆ ಕೆಲ ಕಾಲ ಚರ್ಚಿಸಿದರು.
ತೆಲಂಗಾಣದ ಮುಖ್ಯಮಂತ್ರಿ ಕೆ.ಚಂದ್ರಶೇಖರ್ ರಾವ್ ಅವರೊಂದಿಗೆ ಮಾತುಕತೆ ನಡೆಸುವ ಮುನ್ನ ಕುಮಾರಸ್ವಾಮಿ, ತೆಲಂಗಾಣ ಸಚಿವರು ಹಾಗೂ ಕೆ.ಚಂದ್ರಶೇಖರ್ ರಾವ್ ಅವರ ಪುತ್ರರೂ ಆಗಿರುವ ಕೆಟಿಆರ್ ಅವರನ್ನು ಭೇಟಿಯಾಗಿ ಚರ್ಚಿಸಿರುವುದು ಕುತೂಹಲ ಮೂಡಿಸಿದೆ.