ವರ್ಷಕ್ಕೆ ಒಮ್ಮೆ ತೆರೆಯುವ ಹಾಸನಾಂಬೆ ದೇವಾಲಯದ ಬಾಗಿಲು ಈ ಬಾರಿ ಅಕ್ಟೋಬರ್ 13 ರಂದು ತೆರೆಯಲಿದೆ. ಒಟ್ಟು ಹದಿನೈದು ದಿನಗಳ ಕಾಲ ದೇಗುಲ ತೆರೆದಿರಲಿದ್ದು, ಇದರ ವೀಕ್ಷಣೆಗಾಗಿ ಹಾಸನಕ್ಕೆ ರಾಜ್ಯ ಮಾತ್ರವಲ್ಲದೆ ಹೊರ ರಾಜ್ಯಗಳಿಂದಲೂ ಭಕ್ತರು ಆಗಮಿಸುತ್ತಾರೆ.
ಅಶ್ವೀಜ ಮಾಸದ ಶುಕ್ಲ ಪಕ್ಷದ ಮೊದಲ ಗುರುವಾರದಂದು ದೇಗುಲದ ಬಾಗಿಲು ಭಕ್ತರಿಗಾಗಿ ತೆರೆಯಲಿದ್ದು, ಬಲಿಪಾಡ್ಯಮಿಯ ಮಾರನೇ ದಿನ ವಿಧಿ ವಿಧಾನಗಳೊಂದಿಗೆ ಶಾಸ್ತ್ರೋಕ್ತವಾಗಿ ಮುಚ್ಚಲಾಗುತ್ತದೆ.
ಅಕ್ಟೋಬರ್ 13 ರಿಂದ ಅಕ್ಟೋಬರ್ 27 ರವರೆಗೆ ದೇಗುಲದ ಬಾಗಿಲು ತೆರೆದಿರಲಾಗಿತ್ತಾದರೂ ಅಕ್ಟೋಬರ್ 25ರಂದು ಸೂರ್ಯ ಗ್ರಹಣ ಹಾಗೂ ಅಕ್ಟೋಬರ್ 27ರ ಕೊನೆಯ ದಿನದಂದು ಸಾರ್ವಜನಿಕರಿಗೆ ದೇಗುಲ ಪ್ರವೇಶ ಇರುವುದಿಲ್ಲ. ಹೀಗಾಗಿ 12 ದಿನಗಳ ಕಾಲ ಭಕ್ತರು ಹಾಸನಾಂಬೆಯ ದರ್ಶನ ಪಡೆಯಬಹುದಾಗಿದೆ.