ಬೆಂಗಳೂರು: ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಆಡಳಿತ ಪಕ್ಷ ಬಿಜೆಪಿ ವಿರುದ್ಧ ಹೊಸ ಬಾಂಬ್ ಸಿಡಿಸಿದ್ದಾರೆ. ಬಿಜೆಪಿ ಭ್ರಷ್ಟಾಚಾರದ ಬಗ್ಗೆ ದಾಖಲೆಗಳನ್ನು ಬಿಡುಗಡೆ ಮಾಡುವುದಾಗಿ ಹೇಳಿದ್ದಾರೆ.
ವಿಧಾನಸೌಧದಲ್ಲಿ ಮಾತನಾಡಿದ ಮಾಜಿ ಸಿಎಂ ಕುಮಾರಸ್ವಾಮಿ, ಭ್ರಷ್ಟಾಚರದ ಬಗ್ಗೆ ದಾಖಲೆ ಕೊಡಿ ಎಂದು ಕೆಣಕುತ್ತಿದ್ದಾರೆ. ಸರ್ಕಾರಿ ಆಸ್ತಿ ಪರಭಾರೆ ಬಗ್ಗೆ ದಾಖಲೆ ಬಿಡುಗಡೆ ಮಾಡುತ್ತೇನೆ. ಬಿಜೆಪಿಯವರು ಸಾವಿರಾರು ಕೋಟಿ ಆಸ್ತಿ ಪರಭಾರೆ ಮಾಡಿದ್ದಾರೆ. ಈ ಬಗ್ಗೆ ಎಲ್ಲಾ ದಾಖಲೆಗಳನ್ನು ಬಿಡುಗಡೆ ಮಾಡುತ್ತೇನೆ ಎಂದು ತಿಳಿಸಿದ್ದಾರೆ.
ಸದನದಲ್ಲಿ ಈ ಬಗ್ಗೆ ಚರ್ಚಿಸಲು ಕಾಂಗ್ರೆಸ್ ಸಹಕರಿಸಬೇಕು. ನಾನು ದಾಖಲೆ ಬಿಡುಗಡೆ ಮಾಡೋದು ಸ್ಯಾಂಪಲ್ ಅಷ್ಟೆ. ಮೊದಲು ಬಿಜೆಪಿಯವರು ಅದನ್ನು ಅರಗಿಸಿಕೊಳ್ಳಲಿ ಎಂದು ಹೇಳಿದ್ದಾರೆ.