ಶಿವಮೊಗ್ಗ: ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ಶಿಕಾರಿಪುರದಲ್ಲಿ ನಾನು ಸ್ಪರ್ಧಿಸುವ ಬಗ್ಗೆ ಪಕ್ಷ ಸೂಕ್ತ ಸಮಯದಲ್ಲಿ ಸೂಕ್ತ ನಿರ್ಧಾರ ಕೈಗೊಳ್ಳಲಿದೆ ಎಂದು ಬಿಜೆಪಿ ರಾಜ್ಯ ಉಪಾಧ್ಯಕ್ಷ ಬಿ.ವೈ. ವಿಜಯೇಂದ್ರ ಹೇಳಿದರು.
ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈಗಾಗಲೇ ಕ್ಷೇತ್ರದಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದು, ಹಲವಾರು ಕಾರ್ಯಕ್ರಮಗಳನ್ನು ನಡೆಸಲಾಗುತ್ತಿದೆ. ಸೊರಬದಲ್ಲಿಯೂ ಶೀಘ್ರದಲ್ಲೇ ಸಮಾವೇಶ ನಡೆಸಲು ಉದ್ದೇಶಿಸಲಾಗಿದೆ ಎಂದರು.
ಬಿಜೆಪಿ ಕಾರ್ಯಕ್ರಮಗಳನ್ನು ಹಾಗೂ ಆಡಳಿತವನ್ನು ನೋಡುತ್ತಿರುವ ಕಾಂಗ್ರೆಸ್ ನಾಯಕರಿಗೆ ಹತಾಶೆಯಾಗಿದೆ. ಹೀಗಾಗಿಯೇ ಇಲ್ಲ ಸಲ್ಲದ ಟೀಕೆ ಸಿದ್ಧರಾಮಯ್ಯ ಮಾಡುತ್ತಿದ್ದಾರೆ. ಅವರಿಗೆ ವಿಧಾನಸಭೆಯಲ್ಲಿ ಪಕ್ಷದ ನಾಯಕರು ಉತ್ತರ ನೀಡಲಿದ್ದಾರೆ ಎಂದು ಹೇಳಿದರು.
ಗುಲಾಂ ನಬಿ ಆಜಾದ್, ಕಪಿಲ್ ಸಿಬಲ್ ಸೇರಿದಂತೆ ಅನೇಕ ನಾಯಕರು ಕಾಂಗ್ರೆಸ್ ಪಕ್ಷ ತೊರೆಯುತ್ತಿದ್ದಾರೆ. ಇದರಿಂದಾಗಿ ಪಕ್ಷವೇ ದೇಶದಲ್ಲಿ ಅಳಿಸಿಹೋಗುವ ಸ್ಥಿತಿಗೆ ಬಂದಿದೆ. ಆದರೂ, ಬಿಜೆಪಿಯನ್ನು ಟೀಕೆ ಮಾಡುತ್ತಾ ಅಧಿಕಾರ ಹಿಡಿಯುವ ಹಗಲುಗನಸು ಕಾಣುತ್ತಿದ್ದಾರೆ. ಇದು ಫಲಿಸುವುದಿಲ್ಲ ಎಂದರು.