ಜ್ಞಾನವಾಪಿ ಮಸೀದಿ ಪ್ರಕರಣದಲ್ಲಿ ವಾರಣಾಸಿ ನ್ಯಾಯಾಲಯ ಮಹತ್ವದ ಆದೇಶ ಹೊರಡಿಸಿದ್ದು, ವಿಚಾರಣೆ ನಡೆಸದಂತೆ ತಡೆಕೋರಿ ಅರ್ಜಿ ಸಲ್ಲಿಸಿದ್ದ ಮುಸ್ಲಿಂ ರ ಮನವಿಯನ್ನು ತಿರಸ್ಕರಿಸಿದೆ.
ಈ ಮೂಲಕ ಪೂಜೆಗೆ ಅವಕಾಶ ಕಲ್ಪಿಸಬೇಕೆಂಬ ಹಿಂದೂಗಳ ಮನವಿಯ ಅರ್ಜಿ ವಿಚಾರಣೆಗೆ ಪುರಸ್ಕಾರ ಸಿಕ್ಕಂತಾಗಿದೆ.
ವಾರಾಣಸಿಯ ಜ್ಞಾನವಾಪಿ ಮಸೀದಿಯ ಹೊರಗಿನ ಗೋಡೆಯಲ್ಲಿ ಹಿಂದೂ ದೇವರ ಮೂರ್ತಿಗಳಿದ್ದು, ಅವುಗಳಿಗೆ ಪೂಜೆ ಸಲ್ಲಿಸಲು ಕೋರಿ ಐವರು ಮಹಿಳೆಯರು ಅರ್ಜಿ ಸಲ್ಲಿಸಿದ್ದು, ಇದರ ವಿಚಾರಣೆಗೆ ತಡೆ ನೀಡುವಂತೆ ಕೋರಲಾಗಿತ್ತು. ಇದೀಗ ಹಿರಿಯ ನ್ಯಾಯಾಧೀಶರು, ಇದು ವಿಚಾರಣೆಗೆ ಯೋಗ್ಯ ಪ್ರಕರಣ ಎಂದು ಹೇಳಿದ್ದಾರೆ.