ಬೆಂಗಳೂರು: ವಿಧಾನಮಂಡಲ ಅಧಿವೇಶನದ ಎರಡನೇ ದಿನದ ಕಲಾಪ ಆರಂಭವಾಗಿದ್ದು, ವಿಧಾನ ಪರಿಷತ್ ನಲ್ಲಿ ಕಾಂಗ್ರೆಸ್ ಮಳೆಹಾನಿ ನಿಲುವಳಿ ಮಂಡನೆಗೆ ಮುಂದಾಗಿದೆ.
ಪರಿಷತ್ ಕಲಾಪ ಆರಂಭವಾಗುತ್ತಿದ್ದಂತೆ ಪ್ರಶ್ನೋತ್ತರ ಕಲಾಪಕ್ಕೆ ಅವಕಾಶ ನೀಡಲಾಯಿತು. ಆದರೆ ಕಾಂಗ್ರೆಸ್ ಸದಸ್ಯರು ಮೊದಲು ಮಳೆಹಾನಿ ಬಗ್ಗೆ ನಿಲುವಳಿ ಮಂಡನೆಗೆ ಮುಂದಾದರು. ಈ ವೇಳೆ ಮೊದಲು ಪ್ರಶ್ನೋತ್ತರ ಕಲಾಪಕ್ಕೆ ಅವಕಾಶ ನೀಡುವಂತೆ ಸಚಿವ ಕೋಟಾ ಶ್ರೀನಿವಾಸ ಪೂಜಾರಿ ಮನವಿ ಮಾಡಿದರು.
ಕೋಟಾ ಶ್ರೀನಿವಾಸಪೂಜಾರಿ ಮಾತಿಗೆ ಒಪ್ಪಿದ ಸಭಾಪತಿ ಮಲ್ಕಾಪೂರೆ ಪ್ರಶ್ನೋತ್ತರ ಕಲಾಪಕ್ಕೆ ಅವಕಾಶಕೊಟ್ಟಿದ್ದು, ಬಳಿಕ ಮಳೆಹಾನಿ ನಿಲುವಳಿ ಮಂಡನೆ ಮಾಡುವಂತೆ ಕಾಂಗ್ರೆಸ್ ಸದಸ್ಯರಿಗೆ ಸೂಚಿಸಿದ್ದಾರೆ.