ಮೈಸೂರು: ಮೈಸೂರಿನ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದಲ್ಲಿ ವಾಮಾಚಾರ ನಡೆದಿರುವ ಶಂಕೆ ವ್ಯಕ್ತವಾಗಿದೆ.
ಇಲ್ಲಿನ ಮುಕ್ತ ವಿಶ್ವವಿದ್ಯಾಲಯದ ಸಮೂಹ ಸಂವಹನ ಹಾಗೂ ಪತ್ರಿಕೋದ್ಯಮ ವಿಭಾಗದಲ್ಲಿ ವಾಮಾಚಾರ ನಡೆಸಲಾಗಿದೆ ಎಂಬ ಆರೋಪ ಕೇಳಿಬಂದಿದೆ. ಪತ್ರಿಕೋದ್ಯಮ ವಿಭಾಗದ ಮುಖ್ಯಸ್ಥರ ಕೊಠಡಿಯಲ್ಲಿ ಕೋಳಿ ತಲೆ, ಕಾಲು, ಕುಂಕುಮ, ಕೂದಲು, ಬಳೆ ಚೂರು ಪತ್ತೆಯಾಗಿದೆ.
ಅಲ್ಲದೇ ಸ್ಥಳದಲ್ಲಿ ಇತ್ತೀಚೆಗೆ ಹೆಚ್ ಒ ಡಿ ಸ್ಥಾನದಿಂದ ಬದಲಾಗಿದ್ದ ತೇಜಸ್ವಿ ನವಿಲೂರು ಅವರ ಭಾವಚಿತ್ರ ಕೂಡ ಪತ್ತೆಯಾಗಿದೆ ಎಂದು ತಿಳಿದು ಬಂದಿದೆ. ವಿಶ್ವ ವಿದ್ಯಾಲಯದ ಪತ್ರಿಕೋದ್ಯಮ ವಿಭಾಗದಲ್ಲಿ ಇಂತಹ ಘಟನೆ ನಡೆದಿರುವುದು ಅಚ್ಚರಿಗೆ ಕಾರಣವಾಗಿದೆ.