ಬೆಂಗಳೂರು: ಹಾಲಿನ ದರ 3 ರೂ. ಹೆಚ್ಚಳಕ್ಕೆ ತೀರ್ಮಾನಿಸಿದ್ದು, ತಕ್ಷಣವೇ ದರ ಹೆಚ್ಚಳದ ಬಗ್ಗೆ ನಿರ್ಧಾರ ಕೈಗೊಳ್ಳಬೇಕೆಂದು ಮುಖ್ಯಮಂತ್ರಿಗಳ ಗಮನಕ್ಕೆ ತರಲಾಗುವುದು ಎಂದು ಸಹಕಾರ ಸಚಿವ ಎಸ್.ಟಿ. ಸೋಮಶೇಖರ್ ಹೇಳಿದ್ದಾರೆ.
ವಿಧಾನ ಪರಿಷತ್ ನಲ್ಲಿ ಮಾತನಾಡಿದ ಅವರು, ಹಾಲು ಉತ್ಪಾದಕರ ಜೊತೆಗೆ ಗ್ರಾಹಕರನ್ನು ಕೂಡ ಗಮನಿಸಬೇಕಾಗುತ್ತದೆ. ಹಾಲಿನ ಪ್ಯಾಕೆಟ್ ದರವನ್ನು ಮೂರು ರೂಪಾಯಿ ಹೆಚ್ಚಳ ಮಾಡಿ ಅದನ್ನು ಹಾಲು ಉತ್ಪಾದಕ ರೈತರಿಗೆ ನೀಡಲು ಒಕ್ಕೂಟಗಳು ನಿರ್ಧರಿಸಿವೆ. ಗ್ರಾಹಕರಿಗೆ ಹೊರೆ ಮಾಡುವುದಿಲ್ಲ. ಮುಖ್ಯಮಂತ್ರಿಗಳು ಈ ಬಗ್ಗೆ ತೀರ್ಮಾನ ಕೈಗೊಳ್ಳಲಿದ್ದಾರೆ ಎಂದು ಹೇಳಿದರು.