ಬೆಂಗಳೂರಿನಲ್ಲಿ ಹಲ್ಲೆಗೊಳಗಾಗಿದ್ದ ರೌಡಿಶೀಟರ್ ಗಣೇಶ್(40) ಅಪೋಲೋ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾನೆ.
ಗಣೇಶ್ ಮೇಲೆ ಹಳೆದ್ವೇಷದ ಹಿನ್ನೆಲೆಯಲ್ಲಿ ದುಷ್ಕರ್ಮಿಗಳು ಹಲ್ಲೆ ಮಾಡಿದ್ದರು. ಶೇಷಾದ್ರಿಪುರಂ ನಟರಾಜ ಥಿಯೇಟರ್ ಬಳಿ ಮಾರಕಾಸ್ತ್ರಗಳಿಂದ ಹಲ್ಲೆ ಮಾಡಲಾಗಿತ್ತು. ಬೆಳಿಗ್ಗೆ ಗಣೇಶ್ ಮೇಲೆ ನಾಲ್ವರು ಹಲ್ಲೆ ಮಾಡಿದ್ದರು. ಆಟೋದಲ್ಲಿ ಬಂದಿದ್ದ ದುಷ್ಕರ್ಮಿಗಳು ಲಾಂಗ್ ನಿಂದ ಹಲ್ಲೆ ಮಾಡಿದ್ದು, ಮಾರಣಾಂತಿಕ ಹಲ್ಲೆಗೊಳಗಾಗಿದ್ದ ರೌಡಿಶೀಟರ್ ಗಣೇಶ್ ನನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ಫಲಿಸದೇ ಮೃತಪಟ್ಟಿದ್ದಾನೆ. ಶೇಷಾದ್ರಿಪುರಂ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.