ರಾಜ್ಯ ಸರ್ಕಾರ ಸಶಸ್ತ್ರ ಮೀಸಲು ಪಡೆಗಳಲ್ಲಿ ಖಾಲಿ ಇರುವ 3,484 ಕಾನ್ ಸ್ಟೇಬಲ್ ಹುದ್ದೆಗಳ ನೇಮಕಕ್ಕೆ ಅಧಿಸೂಚನೆ ಹೊರಡಿಸಿದ್ದು, ಈ ಪೈಕಿ 79 ಹುದ್ದೆಗಳನ್ನು ತೃತೀಯ ಲಿಂಗಿ ಅಭ್ಯರ್ಥಿಗಳಿಗೆ ಮೀಸಲಿಡಲಾಗಿದೆ.
ತೃತೀಯ ಲಿಂಗಿ ವ್ಯಕ್ತಿಗಳ (ರಕ್ಷಣಾ ಹಕ್ಕು) ನಿಯಮ 2020 ರ ಅನ್ವಯ ಕೇಂದ್ರ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಸಚಿವಾಲಯ ಅಧಿಸೂಚನೆ ಹೊರಡಿಸಿದ್ದರ ಹಿನ್ನೆಲೆಯಲ್ಲಿ, ಇದೇ ಮೊದಲ ಬಾರಿಗೆ ರಾಜ್ಯ ಪೊಲೀಸ್ ನೇಮಕಾತಿಯಲ್ಲೂ ಮೀಸಲಾತಿ ನೀಡಲಾಗಿದೆ.
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅರ್ಹರಾದ ತೃತೀಯಲಿಂಗಿ ಅಭ್ಯರ್ಥಿಗಳು ಜಿಲ್ಲಾ ಮ್ಯಾಜಿಸ್ಟ್ರೇಟ್ ಅವರಿಂದ ಪ್ರಮಾಣ ಪತ್ರ ಪಡೆಯುವುದು ಕಡ್ಡಾಯವಾಗಿದ್ದು, ಪ್ರಮಾಣ ಪತ್ರ ಇಲ್ಲದಿದ್ದವರಿಗೆ ಮೀಸಲಾತಿ ಅನ್ವಯವಾಗುವುದಿಲ್ಲ ಎಂದು ತಿಳಿಸಲಾಗಿದೆ.