ಅಪ್ರಾಪ್ತೆಯರಿಗೆ ಲೈಂಗಿಕ ದೌರ್ಜನ್ಯ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಚಿತ್ರದುರ್ಗ ಮುರುಘಾ ಮಠದ ಶಿವಮೂರ್ತಿ ಶರಣರನ್ನು ಸೆಪ್ಟೆಂಬರ್ 14ರ ವರೆಗೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದ್ದು, ಇಂದು ಅಂತ್ಯವಾಗುವ ಹಿನ್ನೆಲೆಯಲ್ಲಿ ಅವರನ್ನು ನ್ಯಾಯಾಲಯಕ್ಕೆ ಹಾಜರುಪಡಿಸುವ ಸಾಧ್ಯತೆ ಇದೆ.
ಇದರ ಮಧ್ಯೆ ಜಾಮೀನು ಕೋರಿ ಅವರು ಸಲ್ಲಿಸಿದ್ದ ಅರ್ಜಿಯ ವಿಚಾರಣೆಯನ್ನೂ ಇಂದಿಗೆ ಮುಂದೂಡಲಾಗಿತ್ತು. ಹೀಗಾಗಿ ಮುರುಘಾ ಶರಣರಿಗೆ ಇಂದು ಜಾಮೀನು ಸಿಗುತ್ತದಾ ಅಥವಾ ಮತ್ತಷ್ಟು ದಿನಗಳ ಕಾಲ ನ್ಯಾಯಾಂಗ ವಶಕ್ಕೆ ನೀಡಲಾಗುತ್ತದಾ ಎಂಬುದನ್ನು ಕಾದು ನೋಡಬೇಕಿದೆ.
ಮಠದ ಸಂಸ್ಥೆಗಳ ನೌಕರರಿಗೆ ವೇತನ ನೀಡಬೇಕಾಗಿದ್ದು, ಹೀಗಾಗಿ ಚೆಕ್ ಗಳಿಗೆ ಮುರುಘಾ ಶರಣರು ಸಹಿ ಮಾಡಲು ಅನುಮತಿ ನೀಡಬೇಕು ಎಂದು ಅವರ ಪರ ವಕೀಲರು ಕೋರಿದ್ದು, ಇದಕ್ಕೆ ನ್ಯಾಯಾಧೀಶರು, ಮುರುಘಾ ಶರಣರೇ ಅಧಿಕೃತ ಸಹಿದಾರರು ಎಂಬುದಕ್ಕೆ ದಾಖಲೆ ಸಲ್ಲಿಸಿ ಎಂದು ಸೂಚಿಸಿದ್ದಾರೆ.