ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿ ನೂತನ ಸಂಸತ್ ಭವನ ನಿರ್ಮಾಣವಾಗುತ್ತಿದ್ದು, ಇನ್ನು ಕೆಲವೇ ತಿಂಗಳುಗಳಲ್ಲಿ ಕಾರ್ಯಾರಂಭ ಮಾಡುವ ಸಾಧ್ಯತೆ ಇದೆ. ಇದರ ಮಧ್ಯೆ ತೆಲಂಗಾಣ ವಿಧಾನಸಭೆ ಮಹತ್ವದ ಗೊತ್ತುವಳಿಯೊಂದನ್ನು ಅಂಗೀಕರಿಸಿದೆ.
ನೂತನ ಸಂಸತ್ ಭವನಕ್ಕೆ ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಭವನ ಎಂದು ನಾಮಕರಣ ಮಾಡುವಂತೆ ಕೇಂದ್ರಕ್ಕೆ ಒತ್ತಾಯಿಸಿ ತೆಲಂಗಾಣ ವಿಧಾನಸಭೆಯಲ್ಲಿ ಗೊತ್ತುವಳಿ ಅಂಗೀಕರಿಸಲಾಗಿದೆ.
ಈ ಸಂದರ್ಭದಲ್ಲಿ ಮಾತನಾಡಿದ ಸಚಿವ ಕೆ.ಟಿ. ರಾಮರಾವ್, ಬಿ.ಆರ್. ಅಂಬೇಡ್ಕರ್ ಅವರು ಸಂವಿಧಾನ ರಚನೆಕಾರರು. ಹೀಗಾಗಿ ನೂತನ ಸಂಸತ್ ಭವನಕ್ಕೆ ಅವರ ಹೆಸರಿಡುವುದು ಸೂಕ್ತ ಎಂದು ಅಭಿಪ್ರಾಯಪಟ್ಟರು.