ಹಿಂದಿ ದಿವಸ ಆಚರಣೆ ಕುರಿತಂತೆ ಹೇಳಿಕೆ ನೀಡಿರುವ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ತಾವು ಯಾವ ಭಾಷೆಯ ಕಲಿಕೆಯನ್ನೂ ವಿರೋಧಿಸುವುದಿಲ್ಲ, ಯಾವ ಭಾಷೆಯ ಹೇರಿಕೆಯನ್ನೂ ಸಹಿಸುವುದಿಲ್ಲ ಎಂದು ಹೇಳಿದ್ದಾರೆ.
ಕೇಂದ್ರ ಸರ್ಕಾರ ಹಿಂದಿ ಭಾಷೆಯ ಹೆಸರಲ್ಲಿ ಆರ್ ಎಸ್ ಎಸ್ ಪ್ರಣೀತ ಹಿಂದುತ್ವ ಹೇರುವುದನ್ನು ನಾನು ಖಂಡಿಸುತ್ತೇನೆ ಎಂದು ತಿಳಿಸಿದ್ದಾರೆ.
ಕನ್ನಡ ನಾಡಿನಲ್ಲಿ ಕನ್ನಡಕ್ಕೆ ಮೊದಲ ಪೂಜೆ. ಜಯ ಭಾರತ ಜನನಿಯ ತನುಜಾತೆ, ಜಯ ಹೇ ಕರ್ನಾಟಕ ಮಾತೆ ಎಂದು ಸಿದ್ದರಾಮಯ್ಯ ಸಾಮಾಜಿಕ ಜಾಲತಾಣದಲ್ಲಿ ಶೇರ್ ಮಾಡಿದ್ದಾರೆ.