alex Certify ಅಕ್ಟೋಬರ್ 14ರಂದು ತೆರೆಕಾಣಲಿದೆ ‘ಚಾಂಪಿಯನ್’ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಅಕ್ಟೋಬರ್ 14ರಂದು ತೆರೆಕಾಣಲಿದೆ ‘ಚಾಂಪಿಯನ್’

ಶಾಹುರಾಜ್ ಶಿಂಧೆ ನಿರ್ದೇಶನದ ಬಹು ನಿರೀಕ್ಷೆಯ ʼಚಾಂಪಿಯನ್ʼ ಚಿತ್ರದ ಟ್ರೈಲರನ್ನು ಇತ್ತೀಚೆಗಷ್ಟೇ ಡೈನಾಮಿಕ್ ಸ್ಟಾರ್ ದೇವರಾಜ್ ಲಾಂಚ್ ಮಾಡುವ ಮೂಲಕ ಚಿತ್ರತಂಡಕ್ಕೆ ಶುಭ ಹಾರೈಸಿದ್ದರು.

ಈ ಟ್ರೈಲರ್ ಸಾಕಷ್ಟು ವೀಕ್ಷಣೆ ಪಡೆದಿದ್ದು, ಯೂಟ್ಯೂಬ್ ನಲ್ಲಿ ಧೂಳೆಬ್ಬಿಸಿದೆ. ಈ ಸಿನಿಮಾ ಅಕ್ಟೋಬರ್ 14ರಂದು ರಾಜ್ಯಾದ್ಯಂತ ತೆರೆ ಮೇಲೆ ಅಪ್ಪಳಿಸಲಿದೆ. ಸಚಿನ್ ಧನಪಾಲ್ ಹಾಗೂ ಅದಿತಿ ಪ್ರಭುದೇವ ಪ್ರಮುಖ ಪಾತ್ರದಲ್ಲಿ ಅಭಿನಯಿದ್ದಾರೆ.

ಶಿವಂ ಪ್ರೊಡಕ್ಷನ್ಸ್ ಬ್ಯಾನರ್ ನಡಿ ಶಿವಾನಂದ್ ಚಿತ್ರವನ್ನು ನಿರ್ಮಾಣ ಮಾಡಿದ್ದು, ಖ್ಯಾತ ಸಂಗೀತ ನಿರ್ದೇಶಕ ಅಜನೀಶ್ ಲೋಕನಾಥ್ ಸಂಗೀತ ಸಂಯೋಜನೆ ನೀಡಿದ್ದಾರೆ. ನಟಿ ಸನ್ನಿ ಲಿಯೋನ್ ಈ ಸಿನಿಮಾದ ಒಂದು ಹಾಡಿನಲ್ಲಿ ಹೆಜ್ಜೆ ಹಾಕಿದ್ದಾರೆ.

 

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...