ಬೆಂಗಳೂರು: ಸಚಿವ ಸಂಪುಟ ಸಭೆಯಲ್ಲಿಯೂ ಬೆಂಗಳೂರಿನಲ್ಲಿ ಒತ್ತುವರಿ ತೆರವಿನ ಬಗ್ಗೆ ಚರ್ಚೆ ನಡೆಸಲಾಗಿದ್ದು, ಒತ್ತುವರಿ ತೆರವಿನ ಬಗ್ಗೆ ಸಚಿವರೊಬ್ಬರು ವಿರೋಧ ವ್ಯಕ್ತಪಡಿಸಿದ್ದಾರೆ.
ಒತ್ತುವರಿ ತೆರವು ಸರಿಯಲ್ಲ ಎಂದು ಕ್ಯಾಬಿನೆಟ್ ನಲ್ಲಿ ಸಚಿವ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಏಕಾಏಕಿ ಒತ್ತುವರಿ ತೆರವು ಮಾಡಿ ನಾವು ಕೆಟ್ಟವರಾಗಬೇಕಾ? ಎಂದು ಅವರು ಪ್ರಶ್ನಿಸಿದ್ದಾರೆ. ಬಿಬಿಎಂಪಿ ಚುನಾವಣೆ ಕೂಡ ಹತ್ತಿರ ಬರುತ್ತಿದೆ. ಕಂದಾಯ ಇಲಾಖೆ, ಬಿಬಿಎಂಪಿ ಕಾರ್ಯಾಚರಣೆಯನ್ನು ಮುಂದುವರೆಸಬೇಡಿ ಎಂದು ಸಚಿವರೊಬ್ಬರು ಸಂಪುಟ ಸಭೆಯಲ್ಲಿ ತೀವ್ರ ಆಕ್ಷೇಪಿಸಿದ್ದಾರೆ ಎಂದು ಹೇಳಲಾಗಿದೆ.
ಸಚಿವರೊಬ್ಬರು ತೆರವಿಗೆ ಆಕ್ಷೇಪಿಸಿದ್ದಕ್ಕೆ ಕೆಲವು ಸಚಿವರಿಂದಲೂ ವಿರೋಧ ವ್ಯಕ್ತವಾಗಿದೆ. ಈ ವೇಳೆ ಸಚಿವರನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸಮಾಧಾನ ಮಾಡಿದ್ದಾರೆ. ತೆರವು ನಿಲ್ಲಿಸಲು ಯಾವಾಗ ಏನು ಮಾಡಬೇಕೆಂದು ಗೊತ್ತಿದೆ. ಬೇರೆ ವಿಷಯಕ್ಕೆ ಬನ್ನಿ ಎಂದು ಸಿಎಂ ಸಚಿವರಿಗೆ ತಿಳಿಸಿದ್ದಾರೆ ಎಂದು ಹೇಳಲಾಗಿದೆ.