ಬೆಂಗಳೂರು: ಭಾರೀ ಮಳೆಯಿಂದಾಗಿ ತತ್ತರಿಸಿದ್ದ ಬೆಂಗಳೂರು ಮಹಾನಗರ ಜನತೆಗೆ ಮತ್ತೊಂದು ಆತಂಕ ಎದುರಾಗಿದೆ.
ಬೆಂಗಳೂರು ನಗರದಲ್ಲಿ ಮಲೇರಿಯಾ, ಡೆಂಘಿ, ವೈರಲ್ ಫೀವರ್ ಹೆಚ್ಚಳದ ಆತಂಕ ಎದುರಾಗಿದೆ. ಅತಿಯಾದ ಮಳೆ ಮತ್ತು ಪ್ರವಾಹ ಪರಿಸ್ಥಿತಿಯಿಂದಾಗಿ ಟೈಫಾಯಿಡ್, ಕಾಲರಾ, ಡೆಂಘಿ ವೈರಲ್ ಫೀವರ್ ಗಳು ಹೆಚ್ಚಾಗುತ್ತವೆ. ಇತ್ತೀಚೆಗೆ ಬೆಂಗಳೂರಿನಲ್ಲಿ ಧಾರಾಕಾರ ಮಳೆ ಮತ್ತು ಅನೇಕ ಬಡಾವಣೆಗಳು ಜಲಾವೃತಗೊಂಡಿದ್ದರಿಂದ ಬೆಂಗಳೂರು ನಗರದ ಜನರ ಮೇಲೆ ಆರೋಗ್ಯದ ಮೇಲೆ ಪರಿಣಾಮ ಬೀರಿದ್ದು, ಅನೇಕರಲ್ಲಿ ಜ್ವರ ಕಾಣಿಸಿಕೊಂಡಿದೆ.
ಕಲುಷಿತ ನೀರು ಕುಡಿಯುವ ನೀರಿಗೆ ಮಿಶ್ರಣವಾದಲ್ಲಿ ವಾಂತಿ, ಶ್ವಾಸನಾಳ ಸೋಂಕು, ಹೊಟ್ಟೆ ನೋವು ಕಾಣಿಸಿಕೊಳ್ಳಬಹುದು. ಟೈಫಾಯಿಡ್ ಜ್ವರ, ಹೈಪಟೈಟಿಸ್ ಎ ಮೊದಲಾದ ರೋಗಗಳು ಹರಡಬಹುದಾದ ಸಾಧ್ಯತೆ ಇರುತ್ತದೆ.
ಹೀಗಾಗಿ ಚೆನ್ನಾಗಿ ಬೇಯಿಸಿದ ಆಹಾರ ಸೇವಿಸಬೇಕು, ಶುದ್ಧೀಕರಿಸಿದ ನೀರನ್ನು ಮಾತ್ರ ಕುಡಿಯಬೇಕು. ಪಾತ್ರೆಗಳನ್ನು ಚೆನ್ನಾಗಿ ತೊಳೆಯನೇಕು. ಅಡುಗೆ ಮಾಡುವ ಮೊದಲು ತರಕಾರಿ, ಹಣ್ಣುಗಳನ್ನು ಚೆನ್ನಾಗಿ ತೊಳೆದುಕೊಳ್ಳಬೇಕು. ಸೊಳ್ಳೆ ನಿಯಂತ್ರಿಸಬೇಕು. ಸ್ವಚ್ಛತೆ, ನೈರ್ಮಲ್ಯಕ್ಕೆ ಒತ್ತು ನೀಡಬೇಕೆಂದು ಹೇಳಲಾಗಿದೆ.