ಬಿಡಿಎ ವಸತಿ ಯೋಜನೆಯಡಿ ಗುತ್ತಿಗೆ ನೀಡಿಕೆ ಪ್ರಕರಣದಲ್ಲಿ ತಮ್ಮ ಕುಟುಂಬವನ್ನು ಸಿಲುಕಿಸಲು ಹಿಂದಿನಿಂದಲೂ ಪ್ರಯತ್ನಗಳು ನಡೆಯುತ್ತಿದೆ ಎಂದು ಸಂಸದ ಬಿ.ವೈ. ರಾಘವೇಂದ್ರ ಆರೋಪಿಸಿದ್ದಾರೆ.
ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಬಿಡಿಎ ವಸತಿ ಯೋಜನೆಯಡಿ ಗುತ್ತಿಗೆ ನೀಡಲು ಲಂಚ ಪಡೆದ ಅರೋಪ ಸಂಬಂಧ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಕುಟುಂಬ ಹಾಗೂ ಸಹಕಾರ ಸಚಿವ ಎಸ್.ಟಿ. ಸೋಮಶೇಖರ್ ಅವರ ವಿರುದ್ದ ತನಿಖೆ ನಡೆಸುವಂತೆ ಜನಪ್ರತಿನಿಧಿಗಳ ನ್ಯಾಯಾಲಯ ನಿನ್ನೆ ಆದೇಶ ಹೊರಡಿಸಿರುವ ಬಗ್ಗೆ ಮಾಧ್ಯಮಗಳ ಪ್ರಶ್ನೆಗೆ ಉತ್ತರಿಸಿದರು.
ತಮ್ಮ ಕುಟುಂಬದ ವಿರುದ್ದ ಮೊದಲಿನಿಂದಲೂ ಕೆಲವು ವ್ಯಕ್ತಿಗಳು ಇಂತಹ ಸುಳ್ಳು ಆರೋಪಗಳನ್ನು ನಡೆಸುತ್ತಲೇ ಬಂದಿದ್ದಾರೆ. ಈ ಪ್ರಕರಣ ಸಂಬಂಧ ಕಾನೂನು ರೀತಿ ತನಿಖೆ ನಡೆಯಲಿ. ನಮ್ಮ ಕುಟುಂಬದ ಯಾವುದೇ ಪಾತ್ರವಿಲ್ಲ ಎಂದರು.