ಬೆಂಗಳೂರು: ಸದನದಲ್ಲಿ ಪರಿಷತ್ ವಿಪಕ್ಷ ನಾಯಕ ಬಿ.ಕೆ.ಹರಿಪ್ರಸಾದ್ ಮಾತಿಗೆ ಸಿಎಂ ಬಸವರಾಜ್ ಬೊಮ್ಮಾಯಿ ಗರಂ ಆಗಿದ್ದು, ಪದಬಳಕೆಯ ಬಗ್ಗೆ ಎಚ್ಚರ ವಹಿಸುವಂತೆ ಸಂದೇಶ ರವಾನಿಸಿದ್ದಾರೆ.
ವಿಧಾನಪರಿಷತ್ ಕಲಾಪದ ವೇಳೆ ಬಿ.ಕೆ.ಹರಿಪ್ರಸಾದ್, ಎನ್.ರವಿಕುಮಾರ್ ವಿರುದ್ಧ ವಾಗ್ದಾಳಿ ನಡೆಸುತ್ತಾ ಮಾಮೂಲಿ ಗಿರಾಕಿ ಎಂಬ ಪದ ಬಳಕೆ ಮಾಡಿದ್ದಾರೆ. ಹರಿಪ್ರಸಾದ್ ಹೇಳಿಕೆಗೆ ವೈ.ಎ.ನಾರಾಯಣಸ್ವಾಮಿ ನಿನ್ನನ್ನು ನೋಡಿಕೊಳ್ಳುತ್ತೇವೆ ಎಂದು ಗುಡುಗಿದ್ದಾರೆ. ನಾರಾಯಣಸ್ವಾಮಿ ಹೇಳಿಕೆಗೆ ನೀನೇನು ನೋಡಿಕೊಳ್ಳುವುದು ಎಂದು ಹರಿಪ್ರಸಾದ್ ಕಿಡಿ ಕಾರಿದ್ದಾರೆ. ಈ ವೇಳೆ ಸದನದಲ್ಲಿ ಆಡಳಿತ, ವಿಪಕ್ಷ ಸದಸ್ಯರ ನಡುವೆ ಮಾತಿನ ಚಕಮಕಿ ಆರಂಭವಾಗಿದೆ.
ಪರಿಷತ್ ವಿಪಕ್ಷ ನಾಯಕ ಹರಿಪ್ರಸಾದ್ ಹೇಳಿಕೆಗೆ ಕೋಪಗೊಂಡ ಸಿಎಂ ಬಸವರಾಜ್ ಬೊಮ್ಮಾಯಿ, ಇಂತಹ ಪದ ಬಳಕೆ ಮಾಡಬೇಡಿ ಎಂದು ಎಚ್ಚರಿಸಿದ್ದಾರೆ. ಹೀಗೆಲ್ಲಾ ಪದ ಬಳಕೆ ಮಾಡಬೇಡಿ. ಎಲ್ಲಾ ಸದಸ್ಯರಿಗೂ ಅವರದ್ದೇ ಆದ ಗೌರವ ಇರುತ್ತೆ ಎಂದು ಖಡಕ್ ಆಗಿ ಹೇಳಿದ್ದಾರೆ.