ಪಾಟ್ನಾ: ಬಿಹಾರದ ಬೆಗುಸರಾಯ್ ಜಿಲ್ಲೆಯಲ್ಲಿ ಗುಂಡಿನ ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಹಾರ ಪೊಲೀಸರು ನಾಲ್ವರು ಆರೋಪಿಗಳನ್ನು ಬಂಧಿಸಿದ್ದಾರೆ.
ಯುವರಾಜ್, ಕೇಶವ್, ಅರ್ಜುನ್, ಸುಮಿತ್ ಬಂಧಿತ ಆರೋಪಿಗಳಾಗಿದ್ದಾರೆ. ಹೆದ್ದಾರಿಯಲ್ಲಿ ಸಾರ್ವಜನಿಕರ ಮೇಲೆ ಫೈರಿಂಗ್ ಮಾಡಿದ್ದರು. ಸುಮಾರು 30 ಕಿಲೋ ಮೀಟರ್ ವರೆಗೂ ಗುಂಡಿನ ದಾಳಿ ನಡೆಸಿದ್ದು, 11 ಜನರ ಮೇಲೆ ದಾಳಿ ನಡೆಸಲಾಗಿತ್ತು. ಒಬ್ಬ ಮೃತಪಟ್ಟು, ಎಂಟು ಮಂದಿ ಗಾಯಗೊಂಡಿದ್ದರು.
ಸಿಸಿಟಿವಿ ದೃಶ್ಯಾವಳಿ ಆಧರಿಸಿ ಆರೋಪಿಗಳನ್ನು ಬಂಧಿಸಿದ್ದು, ತನಿಖೆ ಮುಂದುವರೆದಿದೆ ಎಂದು ಪೊಲೀಸ್ ವರಿಷ್ಠಾಧಿಕಾರಿ ಯೋಗೇಂದ್ರ ಕುಮಾರ್ ಹೇಳಿದ್ದಾರೆ.