ನವದೆಹಲಿ: ಆದಾಯ ಮೀರಿದ ಆಸ್ತಿ ಗಳಿಕೆ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯ(ಇಡಿ) ನೋಟೀಸ್ ನೀಡಿರುವ ಹಿನ್ನೆಲೆಯಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಗೆ ಮತ್ತೆ ಸಂಕಷ್ಟದ ಭೀತಿ ಎದುರಾಗಿದ್ದು, ನಾಳೆ ಇಡಿ ವಿಚಾರಣೆಗೆ ಹಾಜರಾಗಲಿದ್ದಾರೆ.
ದಾಖಲೆಗಳ ಸಮೇತ ವಿಚಾರಣೆಗೆ ಹಾಜರಾಗುವಂತೆ ಇಡಿ ನೋಟೀಸ್ ನೀಡಿದ್ದು, ಈ ಹಿನ್ನೆಲೆಯಲ್ಲಿ ಇಂದು ಸಂಜೆ ಡಿ.ಕೆ.ಶಿವಕುಮಾರ್ ದೆಹಲಿಗೆ ತೆರಳಲಿದ್ದು ಕಾನೂನು ತಜ್ಞರ ಜೊತೆ ಚರ್ಚಿಸಲಿದ್ದಾರೆ. ನಾಳೆ ಬೆಳಿಗ್ಗೆ ದಾಖಲೆಗಳ ಸಮೇತ ಇಡಿ ಮುಂದೆ ವಿಚಾರಣೆಗೆ ಹಾಜರಾಗಲಿದ್ದಾರೆ ಎಂದು ತಿಳಿದುಬಂದಿದೆ.
ಇದೇ ಪ್ರಕರಣದಲ್ಲಿ ಡಿ.ಕೆ.ಶಿ ಆಪ್ತರಿಗೂ ಇಡಿ ವಿಚಾರಣೆಗೆ ಹಾಜರಾಗುವಂತೆ ನೋಟೀಸ್ ನೀಡಿದೆ.