ಉಡುಪಿ: ಫುಡ್ ಡೆಲಿವರಿ ಮಾಡುವ ನೆಪದಲ್ಲಿ ಬಂದು ಗಾಂಜಾ ಮಾರಾಟ ಮಾಡುತ್ತಿದ್ದ ಮೂವರು ಫುಡ್ ಡೆಲಿವರಿ ಬಾಯ್ಸ್ ಬಂಧಿಸಿರುವ ಘಟನೆ ಉಡುಪಿಯಲ್ಲಿ ನಡೆದಿದೆ.
ಆರೋಪಿಗಳು ಫುಡ್ ಡೆಲಿವರಿ ಬ್ಯಾಗ್ ನಲ್ಲಿ ಗಾಂಜಾ ಮಾರಾಟ ಮಾಡಲು ಯತ್ನಿಸಿದ್ದರು. ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಸೆನ್ ಅಪರಾಧ ಠಾಣಾ ಪೊಲೀಸರು ಮೂವರನ್ನು ಬಂಧಿಸಿದ್ದಾರೆ.
ಬಂಧಿತರನ್ನು ರವಿಶಂಕರ್, ಅಂಜಲ್ ಬೈಜು, ದೇವಿಪ್ರಸಾದ್ ಎಂದು ಗುರುತಿಸಲಾಗಿದೆ. ಆರೋಪಿಗಳಿಗೆ ಕೇರಳದ ಪಾಲಕಾಡ್ ನಿಂದ ರೈಲಿನಲ್ಲಿ ಗಾಂಜಾ ಸಪ್ಲೈ ಮಾಡಲಾಗುತ್ತಿತ್ತು ಎನ್ನಲಾಗಿದೆ. ಆರೋಪಿಗಳಿಂದ ಒಂದುವರೆ ಕೆಜಿ ಗಾಂಜಾ, 2 ಬೈಕ್, 4 ಮೊಬೈಲ್, 30 ಸಾವಿರ ರೂಪಾಯಿ ನಗದು ವಶಕ್ಕೆ ಪಡೆಯಲಾಗಿದೆ.