ವಿಜಯನಗರ: ಮಕ್ಕಳ ಕಳ್ಳಿ ಎಂದು ತಪ್ಪಾಗಿ ಭಾವಿಸಿ ಮಾನಸಿಕ ಅಸ್ವಸ್ಥೆಯೋರ್ವಳನ್ನು ಗ್ರಾಮಸ್ಥರು ಹಿಡಿದು ಥಳಿಸಿದ ಘಟನೆ ವಿಜಯನಗರ ಜಿಲ್ಲೆಯ ಹೊಸಪೇಟೆ ತಾಲೂಕಿನ ಪಾಪಿನಾಯಕನಹಳ್ಳಿಯಲ್ಲಿ ನಡೆದಿದೆ.
ಮಾನಸಿಕ ಅಸ್ವಸ್ಥೆಯನ್ನು ಪ್ರಶ್ನಿಸಿದಾಗ ಯಾವುದೇ ಪ್ರತಿಕ್ರಿಯೆ ನೀಡಿಲ್ಲ. ಇದರಿಂದ ಆಕೆ ಮಕ್ಕಳ ಕಳ್ಳಿ ಎಂದು ಅನುಮಾನಗೊಂಡ ಗ್ರಾಮಸ್ಥರು ಆಕೆಯನ್ನು ಥಳಿಸಿ ಕೂಡಿ ಹಾಕಿದ್ದಾರೆ.
ವಿಷಯ ತಿಳಿಯುತ್ತಿದಂತೆ ಹೊಸಪೇಟೆ ಗ್ರಾಮೀಣ ಠಾಣೆ ಪೊಲೀಸರು ಸ್ಥಳಕ್ಕೆ ಧಾವಿಸಿ ಮಾನಸಿಕ ಅಸ್ವಸ್ಥೆಯನ್ನು ರಕ್ಷಣೆ ಮಾಡಿದ್ದಾರೆ. ಬಳಿಕ ಸರ್ಕಾರಿ ಆಸ್ಪತ್ರೆಗೆ ಕರೆದೊಯ್ದು ಚಿಕಿತ್ಸೆ ಕೊಡಿಸಿದ್ದಾರೆ. ಅಮಾಯಕರ ಮೇಲೆ ಹಲ್ಲೆ ನಡೆಸದಂತೆ ಸಾರ್ವಜನಿಕರಲ್ಲಿ ಎಸ್ ಪಿ ಅರುಣ್ ಮನವಿ ಮಾಡಿದ್ದಾರೆ.