ಬೆಂಗಳೂರು: ವಿಧಾನಸಭೆಯಲ್ಲಿ ವಿಪಕ್ಷನಾಯಕ ಸಿದ್ದರಾಮಯ್ಯ ಮಾತನಾಡುವಾಗ ಗದ್ದಲ ಉಂಟಾಗಿದೆ. ಸರ್ಕಾರದ ವಿರುದ್ಧ ಆರೋಪಿಸಿದಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಆಕ್ಷೇಪ ವ್ಯಕ್ತಪಡಿಸಿದ್ದಾರೆ.
ಈ ವೇಳೆ ಬಿಜೆಪಿ, ಕಾಂಗ್ರೆಸ್ ಸದಸ್ಯರ ನಡುವೆ ಪರಸ್ಪರ ಆರೋಪ, ವಾಗ್ವಾದ ನಡೆದಿದೆ. ಸದನದ ಬಾವಿಗೆಳಿದು ಕಾಂಗ್ರೆಸ್ ಸದಸ್ಯರು ಪ್ರತಿಭಟನೆ ನಡೆಸಿದ್ದಾರೆ. ಭಿತ್ತಿ ಪತ್ರ ಹಿಡಿದು ಬಿಜೆಪಿ ಸರ್ಕಾರದ ವಿರುದ್ಧ ಘೋಷಣೆ ಕೂಗಿದ್ದಾರೆ . 40 ಪರ್ಸೆಂಟ್ ಸರ್ಕಾರ ಎಂದು ಕಾಂಗ್ರೆಸ್ ಶಾಸಕರು ಧಿಕ್ಕಾರ ಕೂಗಿದ್ದಾರೆ. ಈ ವೇಳೆ ವಿಧಾನಸಭೆ ಕಲಾಪದಲ್ಲಿ ತೀವ್ರ ಗದ್ದಲ, ಕೋಲಾಹಲ ಉಂಟಾಗಿದೆ. ಸ್ಪೀಕರ್ ಕಾಗೇರಿ ಕಲಾಪವನ್ನು ನಾಳೆಗೆ ಮುಂದೂಡಿದ್ದಾರೆ.