ಕಲಬುರಗಿ: ಗಡಿಕೇಶ್ವರ ಗ್ರಾಮದಲ್ಲಿ ಭೂಮಿಯಿಂದ ಎರಡು ಸಲ ಭಾರಿ ಶಬ್ದ ಕೇಳಿ ಬಂದಿದ್ದು, ಇದರಿಂದಾಗಿ ಗ್ರಾಮಸ್ಥರಲ್ಲಿ ಆತಂಕ ಎದುರಾಗಿದೆ.
ಕಲಬುರ್ಗಿ ಜಿಲ್ಲೆಯ ಚಿಂಚೋಳಿ ತಾಲೂಕಿನ ಗಡಿಕೇಶ್ವರ ಗ್ರಾಮದಲ್ಲಿ ಭೂಮಿಯಿಂದ ಎರಡು ಸಲ ಬಾರಿ ಶಬ್ದ ಬಂದಿದೆ. ಸಂಜೆ 5 ಗಂಟೆಗೆ ಮತ್ತು 5:20ರ ಸುಮಾರಿನಲ್ಲಿ ಭೂಮಿಯಿಂದ ಭಾರೀ ಶಬ್ದ ಕೇಳಿ ಬಂದಿದ್ದು, ಗ್ರಾಮದ ಜನರಿಗೆ ಲಘು ಭೂಕಂಪನದ ಅನುಭವವಾಗಿದೆ. ಶಬ್ಧದ ಜೊತೆಗೇ ಲಘು ಕಂಪನದ ಅನುಭವವಾಗಿದ್ದು, ಆತಂಕಗೊಂಡ ಜನ ತಮಗೆ ಕಂಪನದ ಅನುಭವವಾದ ಬಗ್ಗೆ ಹೇಳಿಕೊಂಡಿದ್ದಾರೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.