ಬೆಂಗಳೂರು: ಸೈಮಾ ಅವಾರ್ಡ್ ನಂತರ ನಿಯಮ ಉಲ್ಲಂಘಿಸಿ ಪಾರ್ಟಿ ಮಾಡಿದ ಹಿನ್ನೆಲೆಯಲ್ಲಿ ಪಾರ್ಟಿಯ ಆಯೋಜಕರು ಮತ್ತು ಹೋಟೆಲ್ ಮ್ಯಾನೇಜರ್ ವಿರುದ್ಧ ಎಫ್ಐಆರ್ ದಾಖಲಿಸಲಾಗಿದೆ.
ಸೆಪ್ಟೆಂಬರ್ 12ರಂದು ಬೆಂಗಳೂರಿನ ಜೆಡಬ್ಲ್ಯೂ ಮ್ಯಾರಿಯೆಟ್ ಹೋಟೆಲ್ ನಲ್ಲಿ ಪಾರ್ಟಿ ನಡೆದಿತ್ತು. ಪಾರ್ಟಿಯಲ್ಲಿ ಸ್ಟಾರ್ ನಟರು ಹಾಗೂ ನಟಿಯರು ಭಾಗಿಯಾಗಿದ್ದರು. ರಾತ್ರಿ ಒಂದು ಗಂಟೆಗೆ ಪಾರ್ಟಿ ಮುಗಿಸುವಂತೆ ಪೊಲೀಸರು ಸೂಚನೆ ನೀಡಿದ್ದರು. ಆದರೆ ಒಂದು ಗಂಟೆಗೆ ಮುಗಿಯಬೇಕಿದ್ದ ಪಾರ್ಟಿಯನ್ನು ಬೆಳಗಿನ ಜಾವ 3.30 ರವರೆಗೆ ನಡೆಸಲಾಗಿತ್ತು.
ನಿಯಮ ಉಲ್ಲಂಘಿಸಿದ ಹಿನ್ನೆಲೆಯಲ್ಲಿ ಇನ್ಸ್ಪೆಕ್ಟರ್ ದೂರು ಆಧರಿಸಿ ಕಬ್ಬನ್ ಪಾರ್ಕ್ ಠಾಣೆಯಲ್ಲಿ ಎಫ್ಐಆರ್ ದಾಖಲಿಸಲಾಗಿದೆ. ಪಾರ್ಟಿ ಆಯೋಜಕರು ಮತ್ತು ಹೋಟೆಲ್ ಮ್ಯಾನೇಜರ್ ಗೆ ವಿಚಾರಣೆಗೆ ಹಾಜರಾಗುವಂತೆ ಪೊಲೀಸರು ನೋಟಿಸ್ ನೀಡಿದ್ದಾರೆ.