2002ರ ಗುಜರಾತ್ ಗಲಭೆಗೆ ಸಂಬಂಧಿಸಿದಂತೆ ತನಿಖೆ ನಡೆಸಿದ್ದ ಎಸ್ಐಟಿ ಬುಧವಾರದಂದು ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಕೆ ಮಾಡಿದ್ದು, ಇದರಲ್ಲಿ ಸ್ಪೋಟಕ ಮಾಹಿತಿಯನ್ನು ದಾಖಲಿಸಿದೆ.
ಗೋಧ್ರೋತ್ತರ ಗಲಭೆಗೆ ಸಂಬಂಧಿಸಿದಂತೆ ಅಂದು ಗುಜರಾತ್ ಮುಖ್ಯಮಂತ್ರಿಯಾಗಿದ್ದ ನರೇಂದ್ರ ಮೋದಿಯವರನ್ನು ಸಿಲುಕಿಸಲು ಸಾಮಾಜಿಕ ಕಾರ್ಯಕರ್ತೆ ತೀಸ್ತಾ ಸೆಟಲ್ವಾಡ್, ನಿವೃತ್ತ ಡಿಜಿಪಿ ಆರ್.ಬಿ. ಶ್ರೀಕುಮಾರ್, ಮಾಜಿ ಐಪಿಎಸ್ ಅಧಿಕಾರಿ ಸಂಜೀವ್ ಭಟ್ ಮೊದಲಾದವರು ಸುಳ್ಳು ಸಾಕ್ಷ್ಯ ಸೃಷ್ಟಿಸಿ ಆ ಮೂಲಕ ಮೋದಿಯವರಿಗೆ ಗಲ್ಲು ಶಿಕ್ಷೆ ಆಗುವಂತೆ ಮಾಡಲು ಪ್ರಯತ್ನಿಸಿದ್ದರು ಎಂದು ಆರೋಪ ಪಟ್ಟಿಯಲ್ಲಿ ಪ್ರಸ್ತಾಪಿಸಲಾಗಿದೆ.
ಈ ಹಿನ್ನೆಲೆಯಲ್ಲಿ ಆರೋಪಿಗಳ ವಿರುದ್ಧ ಐಪಿಸಿ ಸೆಕ್ಷನ್ 468 (ಸುಳ್ಳು ಸಾಕ್ಷಿ ಸೃಷ್ಟಿ), ಐಪಿಸಿ ಸೆಕ್ಷನ್194 (ಉದ್ದೇಶಪೂರ್ವಕವಾಗಿ ಸುಳ್ಳು ಸಾಕ್ಷಿಯ ಸಲ್ಲಿಕೆ) ಹಾಗೂ ಐಪಿಸಿ ಸೆಕ್ಷನ್ 218 (ಸಾರ್ವಜನಿಕ ಅಧಿಕಾರಿಂದ ಕರ್ತವ್ಯ ಲೋಪ) ಗಳ ಅಡಿ ಪ್ರಕರಣವನ್ನು ದಾಖಲಿಸಿಕೊಳ್ಳಲಾಗಿದೆ.