ಬೆಂಗಳೂರು: ಬೆಂಗಳೂರಿನಲ್ಲಿ ಪಿ ಎಫ್ ಐ ಸಂಘಟನೆ ಮುಖಂಡರ ಕಚೇರಿ ಹಾಗೂ ನಿವಾಸದ ಮೇಲೆ ದಾಳಿ ನಡೆಸಿರುವ ವಿಶೇಷ ಪೊಲೀಸರ ತಂಡ ಇದೀಗ ಮೂವರು ಪಿ ಎಫ್ ಐ ಮುಖಂಡರನ್ನು ವಶಕ್ಕೆ ಪಡೆದಿದೆ.
ಪಿ ಎಫ್ ಐ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಎ.ಕೆ. ಆಶ್ರಫ್, ಮೊಹುದ್ದೀನ್ ಹಳೆಯಂಗಡಿ ಹಾಗೂ ನವಾಜ್ ಎಂಬುವವರನ್ನು ಬೆಂಗಳೂರು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.
ಡಿ.ಜೆ.ಹಳ್ಳಿ, ಕೆ.ಜಿ.ಹಳ್ಳಿಯಲ್ಲಿ ನಡೆದ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ಈ ಮೂವರು ಪಿ ಎಫ್ ಐ ಮುಖಂಡರನ್ನು ಪೊಲೀಸರು ವಶಕ್ಕೆ ಪಡೆದಿದ್ದು ವಿಚಾರಣೆ ತೀವ್ರಗೊಳಿಸಿದ್ದಾರೆ.
ಇನ್ನೊಂದೆಡೆ ಬೆಂಗಳೂರಿನ ಪ್ರೆಜರ್ ಟೌನ್ ಪಿ ಎಫ್ ಐ ಸಂಘಟನೆ ಕಚೇರಿ ಮೇಲೆ ದಾಳಿ ನಡೆಸಿದ ಎನ್ ಐ ಎ ಅಧಿಕಾರಿಗಳು ಕಚೇರಿ ಸೀಜ್ ಮಾಡಿದ್ದು, ದಾಳಿ ವೇಳೆ ಮಹತ್ವದ ದಾಖಲೆಗಳನ್ನು ವಶಕ್ಕೆ ಪಡೆದುಕೊಂಡಿದೆ.