ಶಿವಮೊಗ್ಗ: ಶಿವಮೊಗ್ಗದಲ್ಲಿ ಮೂವರು ಶಂಕಿತ ಉಗ್ರರ ಬಂಧನ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ಚುರುಕುಗೊಳಿಸಿರುವ ಪೊಲೀಸರು, ಬಂಧಿತ ಶಾರಿಕ್ ಕಾರುನ್ನು ಜಪ್ತಿ ಮಾಡಿದ್ದಾರೆ.
ತೀರ್ಥಹಳ್ಳಿಯ ನಿವಾಸದ ಮೇಲೆ ದಾಳಿ ನಡೆಸಿರುವ ಪೊಲೀಸರು ಶಾರಿಕ್ ಬಳಸುತ್ತಿದ್ದ ಕಾರನ್ನು ವಶಕ್ಕೆ ಪಡೆದಿದ್ದಾರೆ. ಅಲ್ಲದೇ ಸ್ಥಳ ಮಹಜರು ನಡೆಸಿದ್ದಾರೆ.
ಇನ್ನೊಂದೆಡೆ ಬಂಧಿತ ಯಾಸಿನ್ ಗೆ ಪಾಕಿಸ್ತಾನದ ಜೊತೆ ನಂಟು ಇರುವ ಬಗ್ಗೆ ಅನುಮಾನ ವ್ಯಕ್ತವಾಗಿದೆ. ಯಾಸಿನ್ ಸಾಮಾಜಿಕ ಜಾಲತಾಣಗಳಲ್ಲಿ ಪಾಕ್ ಬಗ್ಗೆ ಹೆಚ್ಚು ಸರ್ಚ್ ಮಾಡಿದ್ದಾನೆ ಅಲ್ಲದೇ ಪಾಕಿಸ್ತಾನಕ್ಕೆ ಹೋಗಿ ಬಂದಿರುವ ಸಾಧ್ಯತೆ ಕೂಡ ಇದೆ. ಪಾಕಿಸ್ತಾನಕ್ಕೆ ಹೋಗಿದ್ದರೆ ಯಾವ ಸ್ಥಳ, ಯಾವ ಉದ್ದೇಶಕ್ಕೆ ಎಂಬ ನಿಟ್ಟಿನಲ್ಲಿಯೂ ಪೊಲೀಸರು ವಿಚಾರಣೆ ನಡೆಸಿದ್ದಾರೆ.
ಶಂಕಿತ ಉಗ್ರರಾದ ಮಾಜ್, ಯಾಸಿನ್ ಮ್ಮೊಬೈಲ್ ನಲ್ಲಿ 12 ಮೆಸೆಂಜರ್ ಆಪ್ ಗಳು ಪತ್ತೆಯಾಗಿದ್ದು, ಹೆಚ್ಚು ಈ ಆಪ್ ಗಳ ಮೂಲಕವೇ ಸಂಪರ್ಕ ಸಾಧಿಸುತ್ತಿದ್ದರು. ವೈರ್, ಸಿಗ್ನಲ್ ಆಪ್ ಗಳನ್ನು ಹೆಚ್ಚಾಗಿ ಬಳಸುತ್ತಿದ್ದರು ಎಂಬ ಬಗ್ಗೆ ಗೊತ್ತಾಗಿದ್ದು, ಈ ನಿಟ್ಟಿನಲ್ಲಿ ತನಿಖೆ ಚುರುಕುಗೊಂಡಿದೆ.