
ನಟಿ ಸಮಂತಾ ರುತ್ ಪ್ರಭು ಅವರ ಪ್ಯಾನ್ ಇಂಡಿಯಾ ಸಿನಿಮಾ ‘ಯಶೋಧ’ ಶೂಟಿಂಗ್ ಇನ್ನೇನು ಮುಕ್ತಾಯದ ಹಂತದಲ್ಲಿದೆ. ಇದೀಗ ಅವರ ಮತ್ತೊಂದು ಚಿತ್ರ ಶಾಕುಂತಲಂ ಬಿಡುಗಡೆಗೆ ಸಿದ್ಧವಾಗಿದೆ.
ಗುಣಶೇಖರ್ ಆಕ್ಷನ್ ಕಟ್ ಹೇಳಿರುವ ಈ ಸಿನಿಮಾ ಮುಂದಿನ ತಿಂಗಳು ನವೆಂಬರ್ 4ರಂದು ತೆರೆ ಕಾಣಲಿದೆ. ಈ ಕುರಿತು ಚಿತ್ರತಂಡ ಸಾಮಾಜಿಕ ಜಾಲತಾಣದಲ್ಲಿ ಶೇರ್ ಮಾಡಿದೆ. ಗುಣ ಟೀಮ್ ವರ್ಕ್ ಬ್ಯಾನರ್ ನಡಿ ನೀಲಿಮಾ ಗುಣ ಈ ಚಿತ್ರಕ್ಕೆ ಬಂಡವಾಳ ಹೂಡಿದ್ದು, ಖ್ಯಾತ ಸಂಗೀತ ನಿರ್ದೇಶಕ ಮಣಿ ಶರ್ಮ ಸಂಗೀತ ನೀಡಿದ್ದಾರೆ.
ಮೈಥಾಲಾಜಿಕಲ್ ಡ್ರಾಮಾ ಕಥಾಹಂದರ ಹೊಂದಿರುವ ಈ ಚಿತ್ರದಲ್ಲಿ ಸಮಂತಾ ರುತ್ ಪ್ರಭು ಹಾಗೂ ದೇವ್ ಮೋಹನ್ ಪ್ರಮುಖ ಪಾತ್ರದಲ್ಲಿ ಅಭಿನಯಿಸಿದ್ದು. ಪ್ರಕಾಶ್ ರಾಜ್, ಅದಿತಿ ಬಾಲನ್, ಗೌತಮಿ, ಕಬೀರ್ ಬೇಡಿ, ವರ್ಷಿಣಿ, ಹಾಗೂ ಮಧು ಸೇರಿದಂತೆ ಮೊದಲಾದ ಕಲಾವಿದರು ತೆರೆ ಹಂಚಿಕೊಂಡಿದ್ದಾರೆ.
