ಬೆಂಗಳೂರು: ಶೀಘ್ರವೇ ಸಂಪುಟ ವಿಸ್ತರಣೆಗೆ ವರಿಷ್ಠರ ಭರವಸೆ ಸಿಕ್ಕಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಚಿವ ಸಂಪುಟ ವಿಸ್ತರಣೆ ಕುರಿತಾಗಿ ಪಕ್ಷದ ವರಿಷ್ಠರ ಗಮನಕ್ಕೆ ತರಲಾಗಿದ್ದು, ಆದಷ್ಟು ಬೇಗನೆ ಸಂಪುಟ ವಿಸ್ತರಣೆ ಮಾಡುವ ಬಗ್ಗೆ ಭರವಸೆ ನೀಡಿದ್ದಾರೆ ಎಂದು ತಿಳಿಸಿದ್ದಾರೆ.
ಅಧಿವೇಶನ ಮುಕ್ತಾಯವಾಗುವುದನ್ನು ಕಾಯುತ್ತಿದ್ದೆವು, ಪಕ್ಷದ ವರಿಷ್ಠರು ಕರೆಸಿ ಮಾತನಾಡಿದರೆ ಆದಷ್ಟು ಬೇಗನೆ ಸಂಪುಟ ವಿಸ್ತರಣೆ ಪ್ರಕ್ರಿಯೆ ಆರಂಭಿಸಲಾಗುತ್ತದೆ. ಕೆಲವೇ ದಿನಗಳಲ್ಲಿ ವರಿಷ್ಠರ ಅನುಮತಿಯೊಂದಿಗೆ ಸಚಿವ ಸಂಪುಟ ವಿಸ್ತರಿಸಲಾಗುವುದು ಎಂದು ಹೇಳಿದ್ದಾರೆ.
ಸಚಿವ ಸ್ಥಾನದ ಆಕಾಂಕ್ಷಿಗಳಾದ ಕೆ.ಎಸ್. ಈಶ್ವರಪ್ಪ, ರಮೇಶ್ ಜಾರಕಿಹೊಳಿ ಅಧಿವೇಶನದಿಂದ ದೂರ ಉಳಿದ ಬಗ್ಗೆ ಪ್ರತಿಕ್ರಿಯೆ ನೀಡಿದ ಅವರು, ವೈಯಕ್ತಿಕ ಕಾರಣದಿಂದ ಅವರು ಅಧಿವೇಶನಕ್ಕೆ ಆಗಮಿಸಿಲ್ಲ ಎಂದು ತಿಳಿಸಿದ್ದಾರೆ.