ಬೆಂಗಳೂರು: ನಕಲಿ ಪ್ರಮಾಣ ಪತ್ರ ನೀಡಿ ರಾಜ್ಯ ಮತ್ತು ಕೇಂದ್ರ ಸರ್ಕಾರದ ಉದ್ಯೋಗ ಪಡೆದ 76 ಮಂದಿಯನ್ನು ಪತ್ತೆ ಮಾಡಿ ಕೇಸ್ ದಾಖಲಿಸಲಾಗಿದೆ ಎಂದು ಸಚಿವ ಕೋಟ ಶ್ರೀನಿವಾಸ ಪೂಜಾರಿ ತಿಳಿಸಿದ್ದಾರೆ.
ವಿಧಾನ ಪರಿಷತ್ ನಲ್ಲಿ ಪ್ರಶ್ನೋತ್ತರ ಕಲಾಪದ ವೇಳೆ ಪಿ.ಆರ್. ರಮೇಶ್ ಅವರ ಪ್ರಶ್ನೆಗೆ ಮಾಹಿತಿ ನೀಡಿದ ಸಚಿವರು, ಸುಳ್ಳು ದಾಖಲೆ ನೀಡಿ ಸರ್ಕಾರಿ ಉದ್ಯೋಗ ಪಡೆದ 24 ಸಿಬ್ಬಂದಿಯನ್ನು ವಜಾ ಮಾಡಲಾಗಿದೆ. ನಕಲಿ ಪ್ರಮಾಣ ಪತ್ರ ನೀಡಿ ಕೇಂದ್ರ ಮತ್ತು ರಾಜ್ಯ ಸರ್ಕಾರದ ಉದ್ಯೋಗ ಪಡೆದ 76 ಮಂದಿಯನ್ನು ಪತ್ತೆ ಮಾಡಿ ಕೇಸ್ ದಾಖಲಿಸಲಾಗಿದೆ ಎಂದು ಹೇಳಿದ್ದಾರೆ.
36 ಪ್ರಕರಣಗಳು ನ್ಯಾಯಾಲಯದಲ್ಲಿದ್ದು, 21 ಜಿಲ್ಲಾ ಮಟ್ಟದ ಜಾತಿ ಪ್ರಕರಣಗಳು ಬಾಕಿ ಇವೆ. 19 ಪ್ರಕರಣಗಳು ತನಿಖಾ ಹಂತದಲ್ಲಿದ್ದು, ಇದುವರೆಗೆ 24 ನೌಕರರನ್ನು ಸೇವೆಯಿಂದ ವಜಾ ಮಾಡಲಾಗಿದೆ ಎಂದರು.