ಬೆಂಗಳೂರು: ರಾಜ್ಯ ಬಿಜೆಪಿ ಸರ್ಕಾರದ 40% ಕಮಿಷನ್ ವಿರುದ್ಧ ಪ್ರತಿಭಟನೆ ನಡೆಸಿರುವ ಕಾಂಗ್ರೆಸ್ ನಾಯಕರು ಪೇಸಿಎಂ ಪೋಸ್ಟರ್ ಅಭಿಯಾನ ನಡೆಸಿದ್ದು, ಇದೀಗ ಕಾಂಗ್ರೆಸ್ ನಾಯಕರ ವಿರುದ್ಧ ಎನ್ ಸಿ ಆರ್ ದಾಖಲಾಗಿದೆ.
ಕಾಂಗ್ರೆಸ್ ನಾಯಕರಿಂದ ಪೇಸಿಎಂ ಪೋಸ್ಟರ್ ಅಂಟಿಸಿದ ಪ್ರಕರಣ ಸಂಬಂಧ ವಿಪಕ್ಷ ನಾಯಕ ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್ ಸೇರಿದಂತೆ ಹಲವರ ವಿರುದ್ಧ ಬೆಂಗಳೂರಿನ ಹೈಗ್ರೌಂಡ್ಸ್ ಠಾಣೆಯಲ್ಲಿ ಎನ್ ಸಿ ಆರ್ ದಾಖಲಾಗಿದೆ.
ನಿನ್ನೆ ಸಂಜೆ ಅನುಮತಿ ಇಲ್ಲದೇ ಏಕಾಏಕಿ ರಸ್ತೆಗೆ ಇಳಿದ ಕಾಂಗ್ರೆಸ್ ನಾಯಕರು, ರಸ್ತೆಯಲ್ಲಿ ಗುಂಪು ಸೇರಿ ವಾಹನ ಸಂಚಾರಕ್ಕೆ ಅಡ್ಡಿಯುಂಟುಮಾಡಿದ್ದಾರೆ. ಅಲ್ಲದೇ ಬೆಂಗಳೂರಿನ ರೇಸ್ ಕೋರ್ಸ್ ರಸ್ತೆಯಲ್ಲಿನ ಗೋಡೆಗಳಿಗೆ ಪೇ ಸಿಎಂ ಪೋಸ್ಟರ್ ಅಂಟಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಇದೀಗ ಕಾಂಗ್ರೆಸ್ ನಾಯಕರ ವಿರುದ್ಧ ಪೊಲೀಸರು ಎನ್ ಸಿ ಆರ್ ದಾಖಲಿಸಿದ್ದಾರೆ.