ರಾಯಚೂರು: ರಾಜ್ಯದಲ್ಲಿ ಮಾದಕವಸ್ತುಗಳ ಕಬಂದ ಬಾಹು ಚಿಕ್ಕ ಚಿಕ್ಕ ಮಕ್ಕಳನ್ನೂ ಟಾರ್ಗೆಟ್ ಮಾಡುತ್ತಿದೆಯೇ ಎಂಬ ಆತಂಕ ಎದುರಾಗಿದೆ. ಮಕ್ಕಳು ಇಷ್ಟಪಡುವ ಚಾಕೋಲೇಟ್ ನಲ್ಲಿಯೂ ಗಾಂಜಾ ಮಿಶ್ರಿತ ಪ್ಲೇವರ್ ಗಳನ್ನು ಹಾಕಿ ಹಂಚಲಾಗುತ್ತಿದೆ ಎಂಬ ಆರೋಪ ಕೇಳಿ ಬಂದಿದೆ.
ಗಾಂಜಾ ಮಿಶ್ರಿತ ಚಾಕೊಲೇಟ್ ದಂಧೆ ನಡೆಸುತ್ತಿರುವ ಆರೋಪದ ಹಿನ್ನೆಲೆಯಲ್ಲಿ ರಾಯಚೂರು ನಗರದ 8 ಸ್ಥಳಗಳಲ್ಲಿ ಪೊಲೀಸರು ದಾಳಿ ನಡೆಸಿ ಪರಿಶೀಲನೆ ನಡೆಸಿದ್ದಾರೆ.
ಅಬಕಾರಿ ಇಲಾಖೆ ಅಧಿಕಾರಿಗಳು ಹಾಗೂ ಪೊಲೀಸರು ನಗರದ ಹಲವೆಡೆ ಪಾನ್ ಶಾಪ್, ಕಿರಾಣಿ ಅಂಗಡಿ, ಬೇಕರಿ ಸೇರಿದಂತೆ 8 ಕಡೆ ದಾಳಿ ನಡೆಸಿ ಪರಿಶೀಲನೆ ನಡೆಸಿದ್ದಾರೆ.
ಚಾಕೊಲೇಟ್ ಮಾದರಿಯಲ್ಲಿಯೇ ಗಾಂಜಾ ಮಿಶ್ರಿತ ಚಾಕೋಲೇಟ್ ತಯಾರಿ ಮಾಡಲಾಗುತ್ತಿದೆ ಎಂಬ ಬಗ್ಗೆ ಖಚಿತ ಮಾಹಿತಿ ಮೇರೆಗೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ.