ನೂತನವಾಗಿ ರಚನೆಯಾಗಿರುವ ವಿಜಯನಗರ ಜಿಲ್ಲೆಯ ಜನತೆಗೆ ರಾಜ್ಯ ಸರ್ಕಾರ ಗುಡ್ ನ್ಯೂಸ್ ನೀಡಿದೆ. ಹೊಸ ಸರ್ಕಾರಿ ಆಸ್ಪತ್ರೆ ನಿರ್ಮಾಣಕ್ಕೆ ಆಡಳಿತಾತ್ಮಕ ಅನುಮೋದನೆ ದೊರಕಿದ್ದು, ಇದಕ್ಕಾಗಿ 129 ಕೋಟಿ ರೂಪಾಯಿಗಳನ್ನು ಬಿಡುಗಡೆ ಮಾಡಲಾಗಿದೆ.
ಒಟ್ಟು ಐದು ಎಕರೆ ವಿಸ್ತೀರ್ಣ ಪ್ರದೇಶದಲ್ಲಿ 250 ಹಾಸಿಗೆಗಳ ಜಿಲ್ಲಾಸ್ಪತ್ರೆ ನಿರ್ಮಾಣವಾಗಲಿದ್ದು, ಹೊರರೋಗಿ ವಿಭಾಗ, ಒಳ ರೋಗಿ ವಿಭಾಗ, ವಾಹನ ನಿಲುಗಡೆ ಜಾಗ, ಮರಣೋತ್ತರ ಪರೀಕ್ಷೆ ವಿಭಾಗ, ಹೋಟೆಲ್, ಸಿಬ್ಬಂದಿಯ ಕ್ವಾಟ್ರಸ್ ಸೇರಿದಂತೆ ಹಲವು ಸೌಲಭ್ಯಗಳು ಇರಲಿವೆ.
ಈ ಮೊದಲು ಹೊಸಪೇಟೆಯಲ್ಲಿರುವ ನೂರು ಹಾಸಿಗೆ ಸಾಮರ್ಥ್ಯದ ಸರ್ಕಾರಿ ಆಸ್ಪತ್ರೆಯನ್ನು ಮೇಲ್ದರ್ಜೆಗೇರಿಸಲು ನಿರ್ಧರಿಸಲಾಗಿತ್ತಾದರೂ ನೂತನ ಜಿಲ್ಲೆ ಘೋಷಿಸಿದ ಬಳಿಕ ಸುಸಜ್ಜಿತವಾದ ಹೊಸ ಸರ್ಕಾರಿ ಆಸ್ಪತ್ರೆ ನಿರ್ಮಾಣಕ್ಕೆ ತೀರ್ಮಾನ ಕೈಗೊಳ್ಳಲಾಗಿತ್ತು. ಇದಕ್ಕಾಗಿ ರಾಷ್ಟ್ರೀಯ ಹೆದ್ದಾರಿ 50ರ ಬಳಿ ಇರುವ ನಗರಸಭೆಯ 5 ಎಕರೆ ಜಾಗವನ್ನು ಗುರುತಿಸಲಾಗಿದೆ.