ಪ್ರಧಾನಿ ನರೇಂದ್ರ ಮೋದಿಯವರ ಹುಟ್ಟುಹಬ್ಬದ ದಿನದಂದು ನಮೀಬಿಯಾದಿಂದ ಎಂಟು ಚೀತಾಗಳನ್ನು ತಂದು ಮಧ್ಯಪ್ರದೇಶದ ಕುನೋ ಉದ್ಯಾನದಲ್ಲಿ ಬಿಡಲಾಗಿದೆ. ಇವುಗಳು ಇಲ್ಲಿನ ಪರಿಸರಕ್ಕೆ ಹೊಂದಿಕೊಳ್ಳುತ್ತಿದ್ದು, ಬಳಿಕವಷ್ಟೇ ಸಾರ್ವಜನಿಕರ ವೀಕ್ಷಣೆಗೆ ಅವಕಾಶ ಮಾಡಿಕೊಡಲಾಗುತ್ತದೆ.
ಇದರ ಮಧ್ಯೆ ಭಾನುವಾರದಂದು ಪ್ರಧಾನಿ ನರೇಂದ್ರ ಮೋದಿಯವರು ತಮ್ಮ ‘ಮನ್ ಕಿ ಬಾತ್’ ನಲ್ಲಿ ಮಧ್ಯಪ್ರದೇಶದ ಕುನೋ ಉದ್ಯಾನಕ್ಕೆ ತರಲಾಗಿರುವ ಅಪರೂಪದ ಚೀತಾಗಳ ಕುರಿತು ಪ್ರಸ್ತಾಪಿಸಿದ್ದಾರೆ. ಇವುಗಳು ನಮ್ಮ ಪರಿಸರಕ್ಕೆ ಹೊಂದಿಕೊಂಡ ಬಳಿಕ ಸಾರ್ವಜನಿಕ ವೀಕ್ಷಣೆಗೆ ಅವಕಾಶ ಮಾಡಿಕೊಡಲಾಗುತ್ತದೆ ಎಂದಿದ್ದಾರೆ.
ಅಲ್ಲದೆ ಈ ಅಪರೂಪದ ಚೀತಾಗಳನ್ನು ಮೊದಲಿಗೆ ವೀಕ್ಷಿಸಬೇಕೆಂಬ ಆಸೆ ನೀವು ಹೊಂದಿದ್ದರೆ ಅದಕ್ಕೆ ಅವಕಾಶ ಇಲ್ಲಿದೆ. ಈ ಎಂಟು ಚೀತಾಗಳಿಗೆ ಸೂಕ್ತ ಹೆಸರನ್ನು ಸೂಚಿಸುವವರಿಗೆ ಸಾರ್ವಜನಿಕ ವೀಕ್ಷಣೆಗೆ ತೆರೆದುಕೊಂಡ ನಂತರ ಮೊದಲ ವೀಕ್ಷಣೆಗೆ ಅವಕಾಶ ಮಾಡಿ ಕೊಡಲಾಗುತ್ತದೆ. ಹೀಗಾಗಿ MyGov ಆಪ್ / ವೆಬ್ ಸೈಟ್ ನಲ್ಲಿ ಸ್ಪರ್ಧೆ ಆಯೋಜಿಸಲಾಗುತ್ತಿದ್ದು, ಇದರಲ್ಲಿ ಎಲ್ಲರೂ ಪಾಲ್ಗೊಳ್ಳಬಹುದಾಗಿದೆ.