
ನವದೆಹಲಿ: ಮಾಜಿ ಪ್ರಧಾನಿ ಡಾ. ಮನಮೋಹನ್ ಸಿಂಗ್ ಅವರ 90 ನೇ ಜನ್ಮದಿನದಂದು ಪ್ರಧಾನಿ ನರೇಂದ್ರ ಮೋದಿ, ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಶುಭಾಶಯ ಕೋರಿದ್ದಾರೆ.
ಮಾಜಿ ಪ್ರಧಾನಿ ಡಾ. ಮನಮೋಹನ್ ಸಿಂಗ್ ಜಿ ಅವರಿಗೆ ಜನ್ಮದಿನದ ಶುಭಾಶಯಗಳು. ಅವರ ದೀರ್ಘ ಮತ್ತು ಆರೋಗ್ಯಕರ ಜೀವನಕ್ಕಾಗಿ ಪ್ರಾರ್ಥಿಸುತ್ತೇನೆ ಎಂದು ಪ್ರಧಾನಿ ಮೋದಿ ಟ್ವೀಟ್ ಮಾಡಿದ್ದಾರೆ.
ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಕೂಡ ಡಾ ಸಿಂಗ್ ಅವರ ಜನ್ಮದಿನದ ಶುಭಾಶಯಗಳನ್ನು ಕೋರಿದ್ದಾರೆ.
ಭಾರತದ ಅತ್ಯುತ್ತಮ ರಾಜನೀತಿಜ್ಞರಲ್ಲಿ ಒಬ್ಬರಾದ ಡಾ. ಮನಮೋಹನ್ ಸಿಂಗ್ ಅವರಿಗೆ ಜನ್ಮದಿನದ ಶುಭಾಶಯಗಳು ಆರೋಗ್ಯ ಮತ್ತು ಸಂತೋಷವಾಗಿರಲಿ ಎಂದು ಟ್ವೀಟ್ ಮಾಡಿದ್ದಾರೆ.
ಮನಮೋಹನ್ ಸಿಂಗ್ ಅವರು ವಿಭಜನೆಯ ಮೊದಲು ಪಂಜಾಬ್ ನ ಗಾಹ್ ಗ್ರಾಮದಲ್ಲಿ ಸೆಪ್ಟೆಂಬರ್ 26, 1932 ರಂದು ಜನಿಸಿದರು. ಅವರು ಪಂಜಾಬ್ ವಿಶ್ವವಿದ್ಯಾಲಯ, ಕೇಂಬ್ರಿಡ್ಜ್ ಮತ್ತು ಆಕ್ಸ್‌ಫರ್ಡ್‌ನಲ್ಲಿ ಅಧ್ಯಯನ ಮಾಡಿದರು.
ಸತತ ಎರಡು ಅವಧಿಗೆ (2004-2014) ಪ್ರಧಾನಿಯಾಗಿದ್ದ ಡಾ. ಸಿಂಗ್ ಅವರು ಇಂದು 90 ನೇ ವರ್ಷಕ್ಕೆ ಕಾಲಿಟ್ಟಿದ್ದಾರೆ. ಅವರು ಹೆಸರಾಂತ ಅರ್ಥಶಾಸ್ತ್ರಜ್ಞರಾಗಿದ್ದು, 1990 ರ ದಶಕದಲ್ಲಿ ವ್ಯಾಪಕವಾದ ಸುಧಾರಣೆಗಳನ್ನು ಪರಿಚಯಿಸಿದ ಕೀರ್ತಿಗೆ ಪಾತ್ರರಾಗಿದ್ದಾರೆ.