ಎಲೆಕ್ಟ್ರಿಕ್ ದ್ವಿಚಕ್ರ ವಾಹನ ತಯಾರಕ ಹೀರೋ ಎಲೆಕ್ಟ್ರಿಕ್ ಕಂಪನಿ ರಾಜಸ್ಥಾನದಲ್ಲಿ 2 ಮಿಲಿಯನ್ ಯೂನಿಟ್ಗಳ ಮೆಗಾ ಎಲೆಕ್ಟ್ರಿಕ್ ವಾಹನಗಳ ಉತ್ಪಾದನಾ ಕೇಂದ್ರವನ್ನು ಸ್ಥಾಪಿಸಲು ಮುಂದಾಗಿದೆ.
ಈ ಯೋಜನೆಯ ವಾರ್ಷಿಕ ವೆಚ್ಚ ಬರೋಬ್ಬರಿ 1,200 ಕೋಟಿ ರೂಪಾಯಿ. ಈ ಸಂಬಂಧ ಹೂಡಿಕೆ ಮಾಡಲು ರಾಜ್ಯ ಸರ್ಕಾರದೊಂದಿಗೆ ಒಪ್ಪಂದಕ್ಕೂ ಹೀರೋ ಎಲೆಕ್ಟ್ರಿಕ್ ಕಂಪನಿ ಸಹಿ ಹಾಕಿದೆ.
ಕಂಪನಿಯ ಪ್ರಕಾರ, ಪ್ರಸ್ತಾವಿತ ಘಟಕವು ಸಲಾರ್ಪುರ ಕೈಗಾರಿಕಾ ಪ್ರದೇಶದಲ್ಲಿ ತಲೆ ಎತ್ತಲಿದೆ. ಸುಮಾರು 170 ಎಕರೆ ಪ್ರದೇಶದಲ್ಲಿ ಘಟಕವನ್ನು ಸ್ಥಾಪಿಸಲಾಗುವುದು. 2023ರ ಅಂತ್ಯದ ವೇಳೆಗೆ ವಿದ್ಯುತ್ ಚಾಲಿತ ವಾಹನಗಳ ಉತ್ಪಾದನೆ ಇಲ್ಲಿ ಪ್ರಾರಂಭವಾಗಲಿದೆ. ಭಾರತದಾದ್ಯಂತ ಎಲೆಕ್ಟ್ರಿಕ್ ವಾಹನಗಳ ಬಳಕೆ ಹೆಚ್ಚಿಸುವ ಉದ್ದೇಶದಿಂದ ಸಾಮರ್ಥ್ಯ ವರ್ಧನೆಗಾಗಿ ಈ ಘಟಕ ಆರಂಭಿಸುತ್ತಿರುವುದಾಗಿ ಕಂಪನಿ ಹೇಳಿಕೊಂಡಿದೆ.
ಇದು ಸ್ವಚ್ಛ ಚಲನಶೀಲತೆಯ ಪರಿಹಾರ ಬದಲಾವಣೆಯನ್ನು ಮುನ್ನಡೆಸಲು ಮತ್ತು ಪರಿಸರ ಸ್ನೇಹಿ ಪ್ರವಾಸೋದ್ಯಮ ಅಭ್ಯಾಸಗಳನ್ನು ಉತ್ತೇಜಿಸಲು ರಾಜ್ಯಕ್ಕೆ ಅನುವು ಮಾಡಿಕೊಡುತ್ತದೆ ಎಂದು ಹೀರೋ ಎಲೆಕ್ಟ್ರಿಕ್ನ ವ್ಯವಸ್ಥಾಪಕ ನಿರ್ದೇಶಕ ನವೀನ್ ಮುಂಜಾಲ್ ಅಭಿಪ್ರಾಯಪಟ್ಟಿದ್ದಾರೆ. ಈ ಬೃಹತ್ ಘಟಕದಲ್ಲಿ ಪರಿಸರ ಸ್ನೇಹಿ ವ್ಯವಸ್ಥೆಗಳಿರಲಿದೆ.
ರೋಬೋಟಿಕ್ ಶಸ್ತ್ರಾಸ್ತ್ರಗಳು ಮತ್ತು ಸ್ಥಳೀಯ ಕುಶಲಕರ್ಮಿಗಳ ಕಾರ್ಯಪಡೆಯ ಕೌಶಲ್ಯಗಳನ್ನು ಬಳಸಿಕೊಳ್ಳುವುದಾಗಿ ಸಿಇಒ ಸೊಹಿಂದರ್ ಗಿಲ್ ಹೇಳಿದ್ದಾರೆ. ಭವಿಷ್ಯದ ಹೀರೋ ಎಲೆಕ್ಟ್ರಿಕ್ ದ್ವಿಚಕ್ರ ವಾಹನಗಳೆಲ್ಲ ರಾಜಸ್ತಾನದ ಈ ಪ್ಲಾಂಟ್ನಲ್ಲೇ ತಯಾರಾಗುವ ನಿರೀಕ್ಷೆ ಇದೆ.