ಬೆಂಗಳೂರು: ಕೆಲವು ದಿನಗಳಿಂದ ಬಿಡುವು ನೀಡಿದ್ದ ಮಳೆ ಮತ್ತೆ ಆರಂಭವಾಗಿದ್ದು, ಬಂಗಾಳಕೊಲ್ಲಿಯಲ್ಲಿ ಮೇಲ್ಮೈ ಸುಳಿಗಾಳಿ ಉಂಟಾಗಿರುವ ಪರಿಣಾಮ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮೂರು ದಿನ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಕರಾವಳಿಯ ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಮಲೆನಾಡು, ಉತ್ತರ ಒಳನಾಡು ಮತ್ತು ದಕ್ಷಿಣ ಒಳನಾಡಿನ ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗು, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ರಾಮನಗರ, ಮಂಡ್ಯ, ಮೈಸೂರು, ಕೋಲಾರ, ತುಮಕೂರು, ಚಿತ್ರದುರ್ಗ, ಚಿಕ್ಕಬಳ್ಳಾಪುರ, ಯಾದಗಿರಿ, ಕೊಪ್ಪಳ, ಗದಗ, ರಾಯಚೂರು, ವಿಜಯಪುರ, ಧಾರವಾಡ, ಬೆಳಗಾವಿ ಜಿಲ್ಲೆಗಳಲ್ಲಿ ಸೆ. 29 ರ ವರೆಗೆ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕೆಲವು ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ. ಬೆಂಗಳೂರಿನ ಹಲವು ಕಡೆ ಹಾಗೂ ಕೆಲವು ಜಿಲ್ಲೆಗಳಲ್ಲಿ ಮಳೆಯಿಂದ ಜನಜೀವನ ಅಸ್ತವ್ಯಸ್ತಗೊಂಡಿದೆ.