ರಾಂಚಿ: ಗಂಡನ ಎದುರಲ್ಲೇ 22 ವರ್ಷದ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ ಘಟನೆ ಜಾರ್ಖಂಡ್ ರಾಜ್ಯದ ಪಲಾಮು ಜಿಲ್ಲೆಯಲ್ಲಿ ನಡೆದಿದೆ.
ಶನಿವಾರ ರಾತ್ರಿ ಗಂಡನ ಮನೆಯವರೊಂದಿಗೆ ಜಗಳ ಮಾಡಿಕೊಂಡ ಮಹಿಳೆ ಸಮೀಪದ ತಂದೆ ಮನೆಗೆ ನಡೆದುಕೊಂಡು ಹೋಗುವಾಗ ಆಕೆಯ ಪತಿ ಬೈಕ್ ನಲ್ಲಿ ಹಿಂಬಾಲಿಸಿದ್ದಾರೆ. ಈ ವೇಳೆ ಮಹಿಳೆ ಹಾಗೂ ಪತಿಯನ್ನು ಅಡ್ಡಗಟ್ಟಿದ ಆರು ಜನ ದುಷ್ಕರ್ಮಿಗಳು ಥಳಿಸಿದ್ದಾರೆ.
ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ್ದು, ಕೃತ್ಯದ ನಂತರ ಮಹಿಳೆಯನ್ನು ಬೈಕ್ ನಲ್ಲಿ ಬೇರೆ ಕಡೆಗೆ ಕರೆದುಕೊಂಡು ಹೊರಟಿದ್ದಾರೆ. ಈ ವೇಳೆ ಆರೋಪಿಗಳ ಬೈಕ್ ಎದುರಿನಿಂದ ಕಾರ್ ವೊಂದಕ್ಕೆ ಡಿಕ್ಕಿ ಹೊಡೆದಿದ್ದು ಮಹಿಳೆ ಕೂಗಿಕೊಂಡಾಗ ದುಷ್ಕರ್ಮಿಗಳು ಪರಾರಿಯಾಗಲು ಯತ್ನಿಸಿದ್ದಾರೆ.
ಸ್ಥಳೀಯರು ಇಬ್ಬರು ಆರೋಪಿಗಳನ್ನು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದು, ಬಂಧಿತರ ಮಾಹಿತಿ ಆಧರಿಸಿ ಇತರೆ ನಾಲ್ವರು ಆರೋಪಿಗಳನ್ನು ಬಂಧಿಸಲಾಗಿದೆ.