ರಿಲಯನ್ಸ್ ಇಂಡಸ್ಟ್ರೀಸ್ ಮುಖ್ಯಸ್ಥ ಮುಕೇಶ್ ಅಂಬಾನಿ ಅವರನ್ನು ಹಿಂದಿಕ್ಕಿ ಭಾರತದ ಅತಿ ಸಿರಿವಂತರ ಪಟ್ಟಿಯಲ್ಲಿ ಮೊದಲ ಸ್ಥಾನ ಗಳಿಸಿದ್ದ ಗೌತಮ್ ಅದಾನಿ, ವಿಶ್ವ ಸಿರಿವಂತರ ಪಟ್ಟಿಯಲ್ಲೂ ಎರಡನೇ ಸ್ಥಾನದಲ್ಲಿದ್ದರು. ಇದೀಗ ಷೇರುಪೇಟೆಯಲ್ಲಿ ಗೌತಮ್ ಅದಾನಿ ಅವರಿಗೆ ಸಾವಿರಾರು ಕೋಟಿ ರೂಪಾಯಿ ನಷ್ಟವಾಗಿದ್ದು, ಮುಕೇಶ್ ಅಂಬಾನಿಯವರಿಗೂ ಹಿನ್ನಡೆಯಾಗಿದೆ.
ಷೇರು ಪೇಟೆಯಲ್ಲಿ ಆದ ನಷ್ಟದ ಕಾರಣಕ್ಕೆ ಗೌತಮ್ ಅದಾನಿ ಅವರ ಸಂಪತ್ತು ಕರಗಿದ್ದು, ಹೀಗಾಗಿ ವಿಶ್ವ ಸಿರಿವಂತರ ಪಟ್ಟಿಯಲ್ಲಿ ಎರಡನೇ ಸ್ಥಾನದಿಂದ ಮತ್ತೆ ಮೂರನೇ ಸ್ಥಾನಕ್ಕೆ ಕುಸಿದಿದ್ದಾರೆ. ಅಮೆಜಾನ್ ಸಂಸ್ಥಾಪಕ ಜೆಫ್ ಬೆಜೋಸ್ ಈಗ ಮತ್ತೊಮ್ಮೆ ವಿಶ್ವದ ಎರಡನೇ ಶ್ರೀಮಂತ ವ್ಯಕ್ತಿಯಾಗಿ ಹೊರಹೊಮ್ಮಿದ್ದಾರೆ.
ಇನ್ನು ವಿಶ್ವ ಶ್ರೀಮಂತರ ಪಟ್ಟಿಯಲ್ಲಿ ಟಾಪ್ 10 ಪಟ್ಟಿಯಲ್ಲಿ ಇದ್ದ ರಿಲಯನ್ಸ್ ಇಂಡಸ್ಟ್ರೀಸ್ ಮುಖ್ಯಸ್ಥ ಹಾಗೂ ಭಾರತದ ಎರಡನೇ ಅತಿ ಸಿರಿವಂತ ವ್ಯಕ್ತಿ ಮುಕೇಶ್ ಅಂಬಾನಿ ಈಗ 11ನೇ ಸ್ಥಾನಕ್ಕೆ ಕುಸಿದಿದ್ದಾರೆ. ಅವರ ಒಟ್ಟು ಆಸ್ತಿ ಮೌಲ್ಯ ಈಗ 6.70 ಲಕ್ಷ ಕೋಟಿ ರೂಪಾಯಿಗಳಾಗಿದೆ.